ADVERTISEMENT

ಷೇರು ವಹಿವಾಟು ಸಹಾಯವಾಣಿ ಸೆಬಿ ಚಿಂತನೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2012, 19:30 IST
Last Updated 1 ಜನವರಿ 2012, 19:30 IST

ಚೆನ್ನೈ (ಪಿಟಿಐ): ಷೇರು ಪೇಟೆಯ ಬಗ್ಗೆ ಹೂಡಿಕೆದಾರರಿಗೆ ಮಾಹಿತಿ ನೀಡಲು, ಷೇರು ನಿಯಂತ್ರಣ ಮಂಡಳಿಯು (ಸೆಬಿ) ಶೀಘ್ರದಲ್ಲಿಯೇ ಉಚಿತ  ಸಹಾಯವಾಣಿ ಆರಂಭಿಸಲಿದೆ.

ಈ ಸಹಾಯವಾಣಿ ಮೂಲಕ ಹೂಡಿಕೆದಾರರು ಷೇರುಪೇಟೆ ವಹಿವಾಟಿನ ಬಗ್ಗೆ ಯಾವುದೇ ಪ್ರಶ್ನೆಗಳನ್ನು ಕೇಳಿ ತಮ್ಮ ಅನುಮಾನಗಳನ್ನು ಬಗೆಹರಿಸಿಕೊಳ್ಳಬಹುದು. ಸ್ವತಂತ್ರವಾಗಿ ಮಾಹಿತಿ ಪಡೆಯುವುದು ಹೂಡಿಕೆದಾರರ ಪಾಲಿಗೆ ಹೆಚ್ಚು ಉಪಯುಕ್ತಕರವಾಗಿರಲಿದೆ ಎನ್ನುವ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿ ಎಂದು `ಸೆಬಿ~ ಅಧ್ಯಕ್ಷ ಯು. ಕೆ. ಸಿನ್ಹಾ ಹೇಳಿದ್ದಾರೆ.

ಹಣಕಾಸು ಮಾರುಕಟ್ಟೆ ಬಗ್ಗೆ ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ಒದಗಿಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಸಹಯೋಗದಲ್ಲಿ ಹಣಕಾಸು ಮಾರುಕಟ್ಟೆಗೆ ಸಂಬಂಧಿಸಿದ ಪಠ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹಣಕಾಸು ಮಾರುಕಟ್ಟೆ ವಹಿವಾಟಿನ  ಕನಿಷ್ಠ ಮಾಹಿತಿಯನ್ನಾದರೂ ವಿದ್ಯಾರ್ಥಿಗಳು ತಿಳಿದುಕೊಂಡಿರಬೇಕು ಎನ್ನುವುದು `ಸೆಬಿ~ ಆಶಯವಾಗಿದೆ. `ಸಿಬಿಎಸ್‌ಇ~ ಜತೆಗಿನ ಪ್ರಯೋಗದ ಫಲಶ್ರುತಿ ಆಧರಿಸಿ ಅದನ್ನು   ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.