ADVERTISEMENT

ಸಾಲ ನೀಡಿಕೆ:ಪ್ರಣವ್ ಸಲಹೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST

ನವದೆಹಲಿ (ಪಿಟಿಐ):  ಜಾಗತಿಕ ಅರ್ಥವ್ಯವಸ್ಥೆ ತೀವ್ರ ಅಪಾಯಕಾರಿ ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ,  ಬ್ಯಾಂಕುಗಳು  `ಸಾಲ ನೀಡಿಕೆಯಲ್ಲಿ~ ಕಠಿಣ ನೀತಿ ಅನುಸರಿಸಬೇಕು ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.

ಆಹಾರ ಹಣದುಬ್ಬರ ದರ ಹಿತಕರ ಮಟ್ಟಕ್ಕೆ ಇಳಿಕೆ ಕಾಣದಿರುವ ಹಿನ್ನೆಲೆಯಲ್ಲಿ ಬಡ್ಡಿ ದರ ಗರಿಷ್ಠ ಮಟ್ಟ ತಲುಪಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವುದಿಂದ ಬ್ಯಾಂಕುಗಳು ಸಾಲ ನೀಡುವಾಗ ತುಂಬಾ ಎಚ್ಚರಿಕೆ ವಹಿಸಬೇಕು ಎಂದು ಅವರು ಬುಧವಾರ ಇಲ್ಲಿ ನಡೆದ ಇಂಡಿಯನ್ ಬ್ಯಾಂಕ್‌ನ 106ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅಭಿಪ್ರಾಯಪ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.