ನವದೆಹಲಿ (ಪಿಟಿಐ): ಇತ್ತೀಚಿನ ದಿನಗಳಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಕುಸಿತದ ಹಾದಿಯಲ್ಲಿರುವುದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕಳೆದ ನವೆಂಬರ್ 2010ರಿಂದ ಇಲ್ಲಿಯವರೆಗೆ ಸಂವೇದಿ ಸೂಚ್ಯಂಕ 2,500 ಅಂಶಗಳಷ್ಟು ಕುಸಿದಿದೆ. ಆದರೆ, ಇದರಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ನಮೊ ನಾರಾಯಣ ಮೀನಾ ಪ್ರಶ್ನೋತ್ತರ ವೇಳೆಯಲ್ಲಿ ರಾಜ್ಯಸಭೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.