ಮುಂಬೈ (ಪಿಟಿಐ): ಶುಕ್ರವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು 95 ಅಂಶಗಳಷ್ಟು ಏರಿಕೆ ಕಂಡಿದ್ದು, 16,739 ಅಂಶಗಳಿಗೆ ವಹಿವಾಟು ಕೊನೆಗೊಳಿಸಿದೆ.
ಮೂರನೆಯ ತ್ರೈಮಾಸಿಕ ಅವಧಿಯ ಕಾರ್ಪೊರೇಟ್ ಫಲಿತಾಂಶಗಳು ಏರಿಕೆ ಕಂಡಿರುವುದು ಮತ್ತು ವಿದೇಶಿ ವಿತ್ತೀಯ ಹೂಡಿಕೆದಾರರ (ಎಫ್‌ಐಐ) ಖರೀದಿ ಭರಾಟೆ ಹೆಚ್ಚಿರುವುದು ಸೂಚ್ಯಂಕ ಏರುವಂತೆ ಮಾಡಿದವು. ರಾಷ್ಟ್ರೀಯ ಷೇರು ಸೂಚ್ಯಂಕ `ನಿಫ್ಟಿ~ ಕೂಡ 30 ಅಂಶಗಳಷ್ಟು ಏರಿಕೆ ಪಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.