ADVERTISEMENT

ಸೂಚ್ಯಂಕ ಏರಿಕೆ

ಪಿಟಿಐ
Published 11 ಡಿಸೆಂಬರ್ 2017, 19:30 IST
Last Updated 11 ಡಿಸೆಂಬರ್ 2017, 19:30 IST
ಸೂಚ್ಯಂಕ ಏರಿಕೆ
ಸೂಚ್ಯಂಕ ಏರಿಕೆ   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ವಹಿವಾಟು ಅವಧಿಯಲ್ಲಿಯೂ ಸೂಚ್ಯಂಕಗಳು ಏರಿಕೆ ಕಂಡಿವೆ.

ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎನ್ನುವ ಬಗ್ಗೆ ವಹಿವಾಟುದಾರರು ಹೆಚ್ಚಿನ ನಿರೀಕ್ಷೆ  ಇಟ್ಟುಕೊಂಡಿದ್ದಾರೆ. ಇದರಿಂದ ಹೂಡಿಕೆ ಚಟುವಟಿಕೆ ಹೆಚ್ಚಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

ಜಾಗತಿಕ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯುತ್ತಿರುವುದು ಸಹ ದೇಶಿ ಷೇರುಪೇಟೆಗಳಲ್ಲಿ ಸೂಚ್ಯಂಕಗಳ ಏರಿಕೆಗೆ ನೆರವಾಗಿದೆ.

ADVERTISEMENT

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 205  ಅಂಶ ಹೆಚ್ಚಾಗಿ 33,456 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 57 ಅಂಶ ಹೆಚ್ಚಾಗಿ 10,322 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.