ಮುಂಬೈ (ಪಿಟಿಐ): ಮೂಲ ಸೌಕರ್ಯ ರಂಗದ ಹೂಡಿಕೆಗೆ ಸರ್ಕಾರ ಉತ್ತೇಜನ ನೀಡಿರುವುದು ಮತ್ತು ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಸ್ಥಿರಗೊಂಡಿರುವುದರಿಂದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರದ ವಹಿವಾಟಿನಲ್ಲಿ 195 ಅಂಶಗಳಷ್ಟು ಏರಿಕೆ ಕಂಡಿದೆ.
ಕಳೆದ 4 ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಸೂಚ್ಯಂಕ ಗುರುವಾರ ವಹಿವಾಟಿನ ಅಂತ್ಯಕ್ಕೆ ಕಳೆದ ಒಂದು ತಿಂಗಳಲ್ಲಿ ಗರಿಷ್ಠ ಮಟ್ಟ 16649 ಅಂಶಗಳನ್ನು ತಲುಪಿತು.
ಕಳೆದ ಮೂರು ದಿನಗಳಲ್ಲಿ `ಬಿಎಸ್‌ಇ~ ಒಟ್ಟಾರೆ 500 ಅಂಶಗಳಷ್ಟು ಏರಿಕೆ ದಾಖಲಿಸಿದೆ. ಗುರುವಾರ ಮಧ್ಯಂತರ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ರೂ 54ರಷ್ಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.