ADVERTISEMENT

ಸೂಚ್ಯಂಕ: 117 ಅಂಶ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 19:30 IST
Last Updated 13 ಜನವರಿ 2012, 19:30 IST

ಮುಂಬೈ (ಪಿಟಿಐ): ಲೋಹ, ವಿದ್ಯುತ್ ಮತ್ತು ರಿಯಲ್ ಎಸ್ಟೇಟ್ ರಂಗದ  ಷೇರುಗಳಲ್ಲಿ ಖರೀದಿ ಉತ್ಸಾಹ ಕಂಡುಬಂದ ಹಿನ್ನೆಲೆಯಲ್ಲಿ, ಶುಕ್ರವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು 117 ಅಂಶಗಳಷ್ಟು ಚೇತರಿಕೆ ಕಂಡಿದ್ದು, 16,154 ಅಂಶಗಳಿಗೆ ವಹಿವಾಟು ಕೊನೆಗೊಳಿಸಿದೆ. 

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬಡ್ಡಿ ದರ ಕಡಿತಗೊಳಿಸುವ ಸೂಚನೆ ನೀಡಿರುವುದು ಮತ್ತು ಕೈಗಾರಿಕೆ ಉತ್ಪಾದನೆ ವೃದ್ಧಿ ದರ (ಐಐಪಿ) ಚೇತರಿಸಿಕೊಂಡಿರುವುದು ಕೂಡ ಪೇಟೆಗೆ ಬಲ ತುಂಬಿವೆ. ಶುಕ್ರವಾರ ಮಧ್ಯಂತರ ವಹಿವಾಟಿನಲ್ಲಿ ಸೂಚ್ಯಂಕ ಕಳೆದ ಐದು ವಾರಗಳಲ್ಲೇ ಗರಿಷ್ಠ ಮಟ್ಟ 16,257 ತಲುಪಿ ನಂತರ ಇಳಿಕೆ ಕಂಡಿತು.

 ರಾಷ್ಟ್ರೀಯ ಷೇರು ಸೂಚ್ಯಂಕ `ನಿಫ್ಟಿ~ 34 ಅಂಶಗಳಷ್ಟು ಏರಿಕೆ ಪಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.