ADVERTISEMENT

ಸೂಚ್ಯಂಕ: 7ತಿಂಗಳ ಗರಿಷ್ಠ

​ಪ್ರಜಾವಾಣಿ ವಾರ್ತೆ
Published 15 ಜುಲೈ 2013, 19:59 IST
Last Updated 15 ಜುಲೈ 2013, 19:59 IST

ಮುಂಬೈ (ಪಿಟಿಐ):  ಏಳು ವಾರಗಳ ನಂತರ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 20 ಸಾವಿರದ ಗಡಿ ದಾಟಿದೆ. ಸೋಮವಾರ 76 ಅಂಶಗಳಷ್ಟು ಏರಿಕೆ ಪಡೆದ ಸೂಚ್ಯಂಕ  20,034 ಅಂಶಗಳಿಗೆ ವಹಿವಾಟು ಕೊನೆಗೊಳಿಸಿತು.

ರಾಷ್ಟ್ರೀಯ ಷೇರು ಸೂಚ್ಯಂಕ `ನಿಫ್ಟಿ' ಕೂಡ 22 ಅಂಶಗಳಷ್ಟು ಏರಿಕೆ ಪಡೆದು 6,031 ಅಂಶಗಳಿಗೆ ವಹಿವಾಟು ಕೊನೆಗೊಳಿಸಿತು.

ದಿನದ ವಹಿವಾಟಿನಲ್ಲಿ ಎಫ್‌ಎಂಸಿಜಿ, ರಿಯಲ್ ಎಸ್ಟೇಟ್ ಮತ್ತು ಬ್ಯಾಂಕಿಂಗ್ ವಲಯದ ಷೇರುಗಳು ಲಾಭ ಮಾಡಿಕೊಂಡವು. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಪೇಟೆಯಿಂದ ಶುಕ್ರವಾರ ್ಙ644.82 ಕೋಟಿ ಬಂಡವಾಳ ವಾಪಸ್ ಪಡೆದಿದ್ದಾರೆ ಎಂದು ಷೇರುಪೇಟೆ ನಿಯಂತ್ರಣ ಮಂಡಳಿ `ಸೆಬಿ' ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.