ADVERTISEMENT

ಸೆಬಿ ಕ್ರಮಗಳಿಗೆ ಸಿಐಐ ಸ್ವಾಗತ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2011, 19:30 IST
Last Updated 5 ಸೆಪ್ಟೆಂಬರ್ 2011, 19:30 IST

ನವದೆಹಲಿ (ಪಿಟಿಐ): ಬಂಡವಾಳ ಮಾರುಕಟ್ಟೆಯ ನಿಯಂತ್ರಣ ಸಂಸ್ಥೆಯಾಗಿರುವ ಭಾರತೀಯ ಷೇರು ನಿಯಂತ್ರಣ ಮಂಡಳಿ (ಸೆಬಿ) ಕೈಗೊಂಡಿರುವ ಸುಧಾರಣಾ ಕ್ರಮಗಳು ಹೂಡಿಕೆದಾರರ ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗಲಿವೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಬಣ್ಣಿಸಿದೆ.

ಹೂಡಿಕೆದಾರರ ಹಲವಾರು  ಅಗತ್ಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿಯಮಾವಳಿ ಸರಳೀಕರಣಕ್ಕೆ ಕೈಗೊಂಡಿರುವ ಕ್ರಮಗಳು ದೇಶಿ ಷೇರುಪೇಟೆಯಲ್ಲಿ ಹೂಡಿಕೆದಾರರ ವಿಶ್ವಾಸ ಹೆಚ್ಚಿಸಲಿದೆ. ಅಂತರರಾಷ್ಟ್ರೀಯ ಬಂಡವಾಳ ಹೂಡಿಕೆ ಸಮುದಾಯಕ್ಕೂ ಸರಿಯಾದ ಸಂದೇಶ ರವಾನಿಸಲಿದೆ ಎಂದು `ಸಿಐಐ~ನ ಮಹಾ ನಿರ್ದೇಶಕ ಚಂದ್ರಜೀತ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.