ADVERTISEMENT

ಸ್ಥಿರಾಸ್ತಿ ಜಪ್ತಿ ಪ್ರಶ್ನೆ: ದೇವಾಸ್ ಕಂಪೆನಿ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2017, 19:30 IST
Last Updated 6 ಅಕ್ಟೋಬರ್ 2017, 19:30 IST

ಬೆಂಗಳೂರು: ಬಹುಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿರುವ ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ದೇವಾಸ್ ಮಲ್ಟಿ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪೆನಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

ಈ ಕುರಿತಂತೆ ದೇವಾಸ್ ಕಂಪೆನಿ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.

‘ಅರ್ಜಿದಾರರು ತಮ್ಮ ಅಹವಾಲನ್ನು ಸಕ್ಷಮ ಪ್ರಾಧಿಕಾರದ ಮುಂದೆಯೇ ಸಲ್ಲಿಸಿ ನ್ಯಾಯ ಪಡೆಯಬಹುದು’ ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ಗ್ರಾಮೀಣ ಪ್ರದೇಶಗಳಲ್ಲಿ ನಿಸ್ತಂತು ಸೇವೆ ಒದಗಿಸುವ ಬ್ರಾಡ್‌ ಬ್ಯಾಂಡ್ ಯೋಜನೆಗೆ ಸಂಬಂಧಿಸಿದಂತೆ ಇಸ್ರೊ ಹಾಗೂ ದೇವಾಸ್‌ ಕಂಪೆನಿ ನಡುವೆ ₹ 580 ಕೋಟಿ ಮೊತ್ತದ ಒಪ್ಪಂದ ನಡೆದಿತ್ತು. ಈ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂಬ ಅರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ, ಅಂದಿನ ಇಸ್ರೊ ಅಧ್ಯಕ್ಷ ಮಾಧವನ್‌ ನಾಯರ್‌ ವಿರುದ್ಧ ಪ್ರಕರಣ ದಾಖಲಿಸಿತ್ತು. ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಎಂ.ನಟರಾಜ್‌ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.