ADVERTISEMENT

ಹತ್ತಿ ಖರೀದಿ ಸ್ಥಗಿತ: ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2011, 19:30 IST
Last Updated 30 ಅಕ್ಟೋಬರ್ 2011, 19:30 IST

ಹುಬ್ಬಳ್ಳಿ: ಹತ್ತಿ ಖರೀದಿದಾರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ನವೆಂಬರ್ 10ರಿಂದ ರಾಜ್ಯದಲ್ಲಿ ಹತ್ತಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ಹತ್ತಿ ಸಂಘ ಭಾನುವಾರ ಇಲ್ಲಿ ಎಚ್ಚರಿಸಿದೆ.

`ಹತ್ತಿ ಖರೀದಿಯ ಮೇಲೆ ಶೇ. 5ರಷ್ಟು ತೆರಿಗೆಯನ್ನು ವಿಧಿಸಲಾಗುತ್ತಿದೆ. ಇದಲ್ಲದೇ ರಾಜ್ಯದಲ್ಲಿ ಮಾರುಕಟ್ಟೆ ಶುಲ್ಕ ಶೇ.1.5ರಷ್ಟಿದೆ. ಹೀಗಾಗಿ ಸಗಟು ಖರೀದಿದಾರರಿಗೆ ಹೊರೆಯಾಗುತ್ತಿದೆ. ಆದ್ದರಿಂದ ಖರೀದಿ ಮೇಲೆ ವಿಧಿಸಲಾಗಿರುವ ತೆರಿಗೆಯನ್ನು ಶೇ. 2ಕ್ಕೆ ಇಳಿಸಬೇಕು ಎಂದು ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.