ADVERTISEMENT

ಹೊಸ ಬ್ಯಾಂಕ್: ಸಾಲುಗಟ್ಟಿರುವ ಸಂಸ್ಥೆಗಳು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2013, 19:59 IST
Last Updated 15 ಏಪ್ರಿಲ್ 2013, 19:59 IST

ನವದೆಹಲಿ(ಪಿಟಿಐ): ಹೊಸ ಬ್ಯಾಂಕ್ ಸ್ಥಾಪನೆಗೆ ಪರವಾನಗಿ ಕೋರಿ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ)ಗೆ ಅರ್ಜಿ ಸಲ್ಲಿಸಲು 100ಕ್ಕೂ ಹೆಚ್ಚು ಸಂಸ್ಥೆಗಳು ಆಸಕ್ತಿ ತೋರಿವೆ.

`ಆರ್‌ಬಿಐ' ಫೆಬ್ರುವರಿಯಲ್ಲಿ ಹೊಸ ಬ್ಯಾಂಕ್ ಸ್ಥಾಪನೆಗೆ ಸಂಬಂಧಿಸಿ ಅಂತಿಮ ಮಾರ್ಗಸೂಚಿ ಪ್ರಕಟಿಸಿತ್ತು, ಜು. 1ರಿಂದ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅಂತಿಮ ಮಾರ್ಗಸೂಚಿಗೆ ಸಂಬಂಧಿಸಿದಂತೆ ದೂರುಗಳಿದ್ದರೆ ಏ. 10ರೊಳಗೆ ದಾಖಲಿಸುವಂತೆಯೂ ಗಡುವು ನಿಗದಿಪಡಿತ್ತು.

ಈವರೆಗೆ 100ಕ್ಕೂ ಹೆಚ್ಚು ಸಂಸ್ಥೆಗಳು ಹೊಸ ಬ್ಯಾಂಕ್ ಸ್ಥಾಪನೆಗೆ ಆಸಕ್ತಿ ತೋರಿಸಿವೆ. ಆದರೆ, 4ರಿಂದ 5 ಸಂಸ್ಥೆಗಳಿಗೆ ಮಾತ್ರ ಪರವಾನಗಿ ಲಭಿಸಲಿದೆ. ಗರಿಷ್ಠ ಎಂದರೆ 8ರಿಂದ 10 ಸಂಸ್ಥೆಗಳಿಗೆ ಅನುಮತಿ ನೀಡಬಹುದು ಎಂದು ಈ ಬೆಳವಣಿಗೆಗಳನ್ನು ಸಮೀಪದಿಂದ ಬಲ್ಲ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ರಿಲಯನ್ಸ್ ಸಮೂಹ, ಎಲ್ ಅಂಡ್ ಟಿ, ಮಹೀಂದ್ರಾ, ಬಿರ್ಲಾ,  ಟಾಟಾ, ರೆಲಿಗೇರ್ ಸಂಸ್ಥೆಗಳು ಅರ್ಜಿ ಸಲ್ಲಿಸುವುದಾಗಿ ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.