ADVERTISEMENT

‘ಬ್ಯಾಂಕುಗಳಿಗೆ ಅಗತ್ಯ ಬಂಡವಾಳ’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2013, 19:59 IST
Last Updated 21 ಸೆಪ್ಟೆಂಬರ್ 2013, 19:59 IST

ನವದೆಹಲಿ (ಪಿಟಿಐ): ದೇಶದ ಹಣ ಕಾಸು ಮಾರು­ಕಟ್ಟೆ ಸ್ಥಿರಗೊಳ್ಳು­ತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಅಗತ್ಯವಾಗಿರುವ ಸುಮಾರು ರೂ.14 ಸಾವಿರ ಕೋಟಿಯಷ್ಟು  ಬಂಡವಾಳವನ್ನು ಮುಂದಿನ 10ರಿಂದ 15 ದಿನ­ಗಳ ಒಳಗೆ ಪೂರೈಸಲಾಗುವುದು  ಎಂದು ಕೇಂದ್ರ ಸರ್ಕಾರ ಹೇಳಿದೆ.

‘ಹಣಕಾಸು ಮಾರುಕಟ್ಟೆಯಲ್ಲಿ ವಿಶ್ವಾಸ ಮರಳಿರುವ ಸೂಚನೆಗಳು ಕಂಡು ಬಂದಿವೆ.  ಈ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಸರ್ಕಾರಿ ಸ್ವಾಮ್ಯದ ಬ್ಯಾಂಕು­ಗಳಿಗೆ ಬಂಡವಾಳ ಒದಗಿಸಲಾ­ಗು­ವುದು’ ಎಂದು  ಹಣಕಾಸು ಸೇವೆಗಳ ಕಾರ್ಯದರ್ಶಿ ರಾಜೀವ್‌ ಟಕ್ರು ಇಲ್ಲಿ ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಸೂಲಾಗದ ಸಾಲ ಪ್ರಮಾಣ(ಎನ್‌ಪಿಎ) ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದೇನೂ ಅಷ್ಟು ಅಪಾಯಕಾರಿ ಮಟ್ಟದಲ್ಲಿಲ್ಲ. ಬ್ಯಾಂಕ್‌ಗಳು ಈಗಾಗಲೇ ಸಾಲ ವಸೂಲಿಗೆ ಅಗತ್ಯ ಕ್ರಮ ಕೈಗೊಂಡಿವೆ. ಸೆ. 27ರಂದು ಈ ಬಗ್ಗೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.