ಬೆಂಗಳೂರು: ಉಬರ್ ಮತ್ತು ರಿಲಯನ್ಸ್ ಕಮ್ಯೂನಿಕೇಷನ್ಸ್ ಸೇರಿದಂತೆ ನಾಲ್ಕು ಕಂಪೆನಿಗಳು ರಾಜ್ಯದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ನಾಲ್ಕು ಯೋಜನೆಗಳಿಗೆ ರಾಜ್ಯ ಮಟ್ಟದ ಏಕ ಗವಾಕ್ಷಿ ಒಪ್ಪಿಗೆ ಸಮಿತಿ ಅನುಮತಿ ನೀಡಿದೆ.
ಈ ನಾಲ್ಕು ಯೋಜನೆಗಳಿಂದ ರಾಜ್ಯಕ್ಕೆ ₹205 ಕೋಟಿ ಬಂಡವಾಳ ಹರಿದು ಬರಲಿದೆ. ಐಟಿ–ಬಿಟಿ ಸಚಿವ ಎಸ್.ಆರ್. ಪಾಟೀಲ ನೇತೃತ್ವದ ಸಮಿತಿಯು ಯೋಜನೆಗಳಿಗೆ ಹಸಿರು ನಿಶಾನೆ ತೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.