ADVERTISEMENT

1 ಲಕ್ಷ ಟನ್‌ ತೊಗರಿ ಖರೀದಿಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2018, 19:30 IST
Last Updated 6 ಮಾರ್ಚ್ 2018, 19:30 IST
1 ಲಕ್ಷ ಟನ್‌ ತೊಗರಿ ಖರೀದಿಗೆ ಅನುಮತಿ
1 ಲಕ್ಷ ಟನ್‌ ತೊಗರಿ ಖರೀದಿಗೆ ಅನುಮತಿ   

ನವದೆಹಲಿ: ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿಯಾಗಿ ಒಂದು ಲಕ್ಷ ಟನ್‌ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಕೇಂದ್ರದ ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌ ಅವರನ್ನು ಮಂಗಳವಾರ ಸಂಜೆ ಭೇಟಿ ಮಾಡಿ ಈ ಕುರಿತ ಮನವಿ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

‘ಬೆಂಬಲಬೆಲೆ ಯೋಜನೆ ಅಡಿ ಪ್ರಸಕ್ತ ವರ್ಷ 2.65 ಲಕ್ಷ ಟನ್‌ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದರಿಂದ ಈಗಾಗಲೇ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಬಾರಿ ಉತ್ತಮ ಇಳುವರಿ ಬಂದಿರುವುದರಿಂದ ಇನ್ನೂ 2.35 ಲಕ್ಷ ಟನ್‌ ತೊಗರಿ ಖರೀದಿಗೆ ಅನುಮತಿ ಕೋರಿ ಮನವಿ ಸಲ್ಲಿಸಲಾಗಿತ್ತು. ಆದರೆ, ಒಂದು ಲಕ್ಷ ಟನ್‌ ಖರಿದಿಗೆ ಅನುಮತಿ ದೊರೆತಿದೆ’ ಎಂದು ಅವರು ಹೇಳಿದರು.

ADVERTISEMENT

ಸ್ಥಗಿತಗೊಂಡಿರುವ ತೊಗರಿ ಖರೀದಿ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.