ADVERTISEMENT

2012 ಆರ್ಥಿಕ ಸಮೃದ್ಧಿ ವರ್ಷ: ಪ್ರಣವ್ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2012, 19:30 IST
Last Updated 14 ಜನವರಿ 2012, 19:30 IST

ನವದೆಹಲಿ (ಪಿಟಿಐ): ಆಹಾರ ಹಣದುಬ್ಬರ ದರ ಗಣನೀಯ  ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿ ದರಗಳನ್ನು ತಗ್ಗಿಸಲು ಇದು ಸಕಾಲವಾಗಿದೆ. ಇದರಿಂದ 2012ರಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಗಮನಾರ್ಹ ಉತ್ತೇಜನ ಲಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.

2012ನೇ ವರ್ಷ ಎಲ್ಲರಿಗೂ ಸಮೃದ್ಧಿ ತರಲಿದೆ. ದೇಶದ ಆರ್ಥಿಕ ವೃದ್ಧಿ ದರಕ್ಕೆ (ಜಿಡಿಪಿ) ಈ ವರ್ಷ ಮಹತ್ವದ ಕೊಡುಗೆ ನೀಡಲಿದೆ ಎಂದು ಅವರು ಪಾಕ್ಷಿಕವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಹಣದುಬ್ಬರ ದರ ಹಿತಕರ ಮಟ್ಟಕ್ಕೆ ಇಳಿದರೆ ಹೂಡಿಕೆ ಮತ್ತು ಗ್ರಾಹಕರ ಬೇಡಿಕೆ ಚೇತರಿಸಿಕೊಳ್ಳಲಿದೆ. ಮುಖ್ಯವಾಗಿ ಅಗತ್ಯ ವಸ್ತುಗಳ ದರಗಳು ಸ್ಥಿರಗೊಳ್ಳಲಿವೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.