ADVERTISEMENT

ಚಿಟ್‌ಫಂಡ್‌ ಹಗರಣ; ಕಠಿಣ ಕ್ರಮ

ಪಿಟಿಐ
Published 5 ಜನವರಿ 2018, 19:30 IST
Last Updated 5 ಜನವರಿ 2018, 19:30 IST

ನವದೆಹಲಿ: ಚಿಟ್‌ಫಂಡ್‌ ಹೆಸರಿನಲ್ಲಿ ಹೂಡಿಕೆದಾರರನ್ನು ವಂಚಿಸಿದ ಹಗರಣಗಳಲ್ಲಿ ಭಾಗಿಯಾದ ವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಭರವಸೆ ನೀಡಿದೆ.

‘ಭಾರತೀಯ ಷೇರು ನಿಯಂತ್ರಣ ಮಂಡಳಿಯು (ಸೆಬಿ), ಚಿಟ್‌ಫಂಡ್‌ ಹಗರಣಗಳನ್ನು ಪರಿಶೀಲಿಸುತ್ತಿದೆ. ಇಂತಹ ವಂಚಕ ಕಂಪನಿಗಳ ಆಸ್ತಿ ವಶಪಡಿಸಿಕೊಂಡು ಅವುಗಳನ್ನು ಮಾರಾಟ ಮಾಡಿ ಬರುವ ಹಣವನ್ನು ಹೂಡಿಕೆದಾರರಿಗೆ ಮರಳಿಸಲು ಕ್ರಮ ಕೈಗೊಳ್ಳಲಾಗುವುದು. ಹೂಡಿಕೆದಾರರ ಹಿತಾಸಕ್ತಿ ರಕ್ಷಿಸಲು ಕಠಿಣ ಕಾಯ್ದೆ ರೂಪಿಸಲಾಗುತ್ತಿದೆ’ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಹೇಳಿದ್ದಾರೆ.

‘ಹಲವು ಸಂಕೀರ್ಣ ಪ್ರಕ್ರಿಯೆಗಳ ಮೂಲಕ ಕೆಲಮಟ್ಟಿಗೆ ಹಣ ವಸೂಲಿ ಮಾಡಲಾಗಿದೆ. ಇಂತಹ ಹಗರಣಗಳಲ್ಲಿ ಭಾಗಿಯಾದವರು ಯಾವುದೇ ಉನ್ನತ ಹುದ್ದೆಯಲ್ಲಿ ಇರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಜೇಟ್ಲಿ ಅವರು ಅವರು ಪ್ರಶ್ನೋತ್ತರ ಅವಧಿಯಲ್ಲಿ ಶುಕ್ರವಾರ ತಿಳಿಸಿದರು.

ADVERTISEMENT

ಪಶ್ಚಿಮ ಬಂಗಾಳದಲ್ಲಿ ಚಿಟ್‌ ಫಂಡ್‌ಗಳು ಸಾವಿರಾರು ಜನರನ್ನು ವಂಚಿಸಿರುವುದರ ಬಗ್ಗೆ ಕಾಂಗ್ರೆಸ್‌ ಸಂಸದ ಅಧೀರ್‌ ರಂಜನ್‌ ಚೌಧರಿ ಅವರು ವಿಷಯ ಪ್ರಸ್ತಾಪಿಸಿದ್ದರು. ಹಲವಾರು ಗಣ್ಯರು ಇದರಲ್ಲಿ ಭಾಗಿಯಾಗಿದ್ದಾರೆ ಎಂದೂ ಅವರು ದೂರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.