ADVERTISEMENT

ಶೀಘ್ರವೇ ವಾಯಿದಾ ವಹಿವಾಟಿಗೆ ಮ್ಯೂಚುವಲ್‌ ಫಂಡ್‌ ಉದ್ಯಮ

ಪಿಟಿಐ
Published 9 ಜನವರಿ 2018, 19:30 IST
Last Updated 9 ಜನವರಿ 2018, 19:30 IST

ಮುಂಬೈ: ‘ಮ್ಯೂಚುವಲ್ ಫಂಡ್‌ ಸಂಸ್ಥೆಗಳು ಶೀಘ್ರದಲ್ಲಿಯೇ ವಾಯಿದಾ ವಹಿವಾಟು ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲಿವೆ’ ಎಂದು ಮ್ಯೂಚುವಲ್ ಫಂಡ್‌ ಸಂಸ್ಥೆಗಳ ಒಕ್ಕೂಟದ (ಎಎಂಎಫ್ಐ) ಅಧ್ಯಕ್ಷ ಎ. ಬಾಲಸುಬ್ರಮಣಿಯನ್‌ ತಿಳಿಸಿದ್ದಾರೆ.

‘ವಾಯಿದಾ ವಹಿವಾಟು ಮಾರುಕಟ್ಟೆಯಲ್ಲಿ ಭಾಗವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವರ್ಷವೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಇದರಿಂದ ಉದ್ಯಮದ ಬೆಳವಣಿಗೆಗೆ ಅನುಕೂಲ ಆಗಲಿದೆ’ ಎಂದು ಹೇಳಿದ್ದಾರೆ.

ಒಂದೊಮ್ಮೆ ಮ್ಯೂಚುವಲ್ ಫಂಡ್‌ ಸಂಸ್ಥೆಗಳು ವಾಯಿದಾ ವಹಿವಾಟಿನಲ್ಲಿ ಭಾಗವಹಿಸಿದರೆ, ಸಾಂಸ್ಥಿಕ ಹೂಡಿಕೆದಾರರಲ್ಲಿಯೇ ಮೊದಲ ಪ್ರಯತ್ನ ಇದಾಗಲಿದೆ ಎಂದು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) 2017ರ ಫೆಬ್ರುವರಿಯಲ್ಲಿ ಹೇಳಿತ್ತು.

ADVERTISEMENT

ಬ್ಯಾಂಕ್‌ಗಳು ಮತ್ತು ವಿದೇಶಿ ಹೂಡಿಕೆದಾರರಂತೆ ಸಾಂಸ್ಥಿಕ ಹೂಡಿಕೆದಾರರಿಗೂ ಈ ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲು ಅವಕಾಶ ನೀಡುವಂತೆ ಆರ್‌ಬಿಐ ಜತೆ ಮಾತುಕತೆ ನಡೆಸಲಾಗಿದೆ ಎಂದೂ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.