ADVERTISEMENT

ಕೇಂದ್ರ ಬಜೆಟ್‌ ಕಾರಣಕ್ಕೆ ಎಚ್ಚರಿಕೆಯ ವಹಿವಾಟು: ಸೂಚ್ಯಂಕ ಇಳಿಕೆ

ಪಿಟಿಐ
Published 30 ಜನವರಿ 2018, 19:30 IST
Last Updated 30 ಜನವರಿ 2018, 19:30 IST

ಮುಂಬೈ: ಹೂಡಿಕೆದಾರರು ಲಾಭ ಗಳಿಕೆ ಉದ್ದೇಶದ ವಹಿವಾಟು ನಡೆಸಿದರು. ಇದರಿಂದ ಮಂಗಳವಾರ ಷೇರುಪೇಟೆಯಲ್ಲಿ ಮಾರಾಟದ ಒತ್ತಡ ಸೃಷ್ಟಿಯಾಗಿ ಸೂಚ್ಯಂಕಗಳು ಇಳಿಕೆ ಕಾಣುವಂತಾಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 249 ಅಂಶ ಇಳಿಕೆ ಕಂಡು, 36,034 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 81 ಅಂಶ ಹೆಚ್ಚಾಗಿ 11,050 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು.

ADVERTISEMENT

ಗುರುವಾರ ಕೇಂದ್ರ ಬಜೆಟ್‌ ಇರುವುದರಿಂದ ಹೂಡಿಕೆದಾರರು ಷೇರುಪೇಟೆಯಲ್ಲಿ ತೊಡಗಿಸಿದ್ದ ಹಣವನ್ನು ಹಿಂದಕ್ಕೆ ಪಡೆದಿದ್ದು, ಬಜೆಟ್‌ ನಿರ್ಧಾರದ ಬಳಿಕ ಹೊಸದಾಗಿ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ ಎಂದು ದಲ್ಲಾಳಿಗಳು ಹೇಳಿದ್ದಾರೆ. ಏಷ್ಯಾದ ಷೇರುಪೇಟೆಗಳು ದಾಖಲೆ ಮಟ್ಟದಲ್ಲಿ ಇಳಿಕೆ ಕಂಡಿದ್ದು ಸಹ ಪ್ರತಿಕೂಲ ಪರಿಣಾಮ ಬೀರುವಂತಾಯಿತು ಎಂದು ವಿಶ್ಲೇಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.