
ಪಿಟಿಐನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್–ಜನವರಿ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹ ₹ 6.95 ಲಕ್ಷ ಕೋಟಿಗೆ ಏರಿಕೆ ಕಂಡಿದೆ.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಂಗ್ರಹದಲ್ಲಿ ಶೇ 19 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.
2017–18ರಲ್ಲಿ ಪರಿಷ್ಕೃತ ಅಂದಾಜಿನಂತೆ ನೇರ ತೆರಿಗೆ ಮೂಲಕ ₹ 10.05 ಲಕ್ಷ ಕೋಟಿ ಸಂಗ್ರಹವಾಗಲಿದೆ. ಇದರಲ್ಲಿ ಇಲ್ಲಿಯವರೆಗೆ ಸಂಗ್ರಹವಾಗಿರುವ ಪ್ರಮಾಣ ಶೇ 69.2 ರಷ್ಟಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.