ADVERTISEMENT

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಬಜೆಟ್‌ನಲ್ಲಿ ₹100 ಕೋಟಿ ಅನುದಾನ

ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಎಂದು ಹೆಸರು

​ಪ್ರಜಾವಾಣಿ ವಾರ್ತೆ
Published 7 ಜುಲೈ 2023, 9:05 IST
Last Updated 7 ಜುಲೈ 2023, 9:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಬಜೆಟ್‌ನಲ್ಲಿ ₹ 100 ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬಜೆಟ್ ಭಾಷಣದ ವೇಳೆ ಅವರು ಈ ವಿಚಾರ ಪ್ರಸ್ತಾಪಿಸಿದರು.

ಇದಕ್ಕೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಎಂದು ಹೆಸರಿಡಲಾಗುವುದು. ಪ್ರಸಕ್ತ ಸಾಲಿನಲ್ಲೇ ₹ 100 ಕೋಟಿ ಅನುದಾನ ಒದಗಿಸಲಾಗುವುದು ಎಂದು ಸಿಎಂ ಹೇಳಿದರು.

ADVERTISEMENT

2020ರ ರಾಜ್ಯ ಬಜೆಟ್‌ನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಉಲ್ಲೇಖಿಸಲಾಗಿತ್ತು. ಆದರೆ ನಂತರ ಆ ನಿರ್ಧಾರವನ್ನು ಕೈ ಬಿಡಲಾಗಿತ್ತು.

ಅಲ್ಪಸಂಖ್ಯಾತ ಮಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಯೋಜನೆಗೆ ಹಣಕಾಸು ನೆರವನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ. ಆದರೆ, ಈ ಯೋಜನೆಯನ್ನು ನಾವು ಮುಂದುವರೆಸಲು ಇಚ್ಚಿಸಿದ್ದು ಇದಕ್ಕಾಗಿ ವಾರ್ಷಿಕ ₹ 60 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ 10 ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುವುದಾಗಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಪದವಿ ಪೂರ್ವ (ಪಿಯುಸಿ) ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ JEE, NEET, CET ಗೆ ತರಬೇತಿ ನೀಡಲು ಪ್ರತಿಷ್ಟಿತ ಸಂಸ್ಥೆಗಳಿಗೆ ₹ 8 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.