ADVERTISEMENT

Union Budget 2025: ಕ್ಯಾನ್ಸರ್‌ ಸೇರಿ 36 ಜೀವರಕ್ಷಕ ಔಷಧಿಗಳು ಅಗ್ಗ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2025, 10:05 IST
Last Updated 1 ಫೆಬ್ರುವರಿ 2025, 10:05 IST
   

ನವದೆಹಲಿ: ರೋಗಿಗಳ ಮೇಲಿನ ಆರ್ಥಿಕ ಹೊರೆಯನ್ನು ನಿವಾರಿಸುವ ನಿಟ್ಟಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. 2025-26ರ ಕೇಂದ್ರ ಬಜೆಟ್‌ನಲ್ಲಿ 36 ಜೀವರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.

ಈ ಉಪಕ್ರಮವು ಅಗತ್ಯ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಕ್ಯಾನ್ಸರ್ ಮತ್ತು ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಈ 36 ಔಷಧಿಗಳ ಮೇಲೆ ಪ್ರಸ್ತಾವಿತ ಶೇ 5 ರಿಯಾಯಿತಿ ಸುಂಕವನ್ನು ಒಳಗೊಂಡಿರುತ್ತದೆ. ಜೊತೆಗೆ ಅವುಗಳ ತಯಾರಿಕೆಗೆ ಕಸ್ಟಮ್ಸ್ ಸುಂಕಗಳಿಂದ ಸಂಪೂರ್ಣ ವಿನಾಯಿತಿ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಬಜೆಟ್‌ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

2024ರ ಫೆಬ್ರುವರಿಯಲ್ಲಿ, ಸರ್ಕಾರವು ಮೂರು ಪ್ರಮುಖ ಕ್ಯಾನ್ಸರ್ ಔಷಧಿಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು ಕಡಿತಗೊಳಿಸಿತ್ತು.

ಈ ಕ್ರಮವು ಉದ್ದೇಶಿತ ಚಿಕಿತ್ಸಾ ಔಷಧಗಳು ಮತ್ತು ರೇಡಿಯೊಥೆರಪಿ ಯಂತ್ರಗಳು ಹಾಗೂ ರೊಬೊಟಿಕ್ಸ್‌ನಂತಹ ಸುಧಾರಿತ ಕ್ಯಾನ್ಸರ್ ಚಿಕಿತ್ಸಾ ಸಾಧನಗಳಿಗೆ ವಿಸ್ತರಿಸಬೇಕು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇವುಗಳಲ್ಲಿ ಹೆಚ್ಚಿನವು ಶೇ 37ರಷ್ಟು ಕಸ್ಟಮ್ಸ್ ಸುಂಕವನ್ನು ಹೊಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.