ADVERTISEMENT

ನಿರೀಕ್ಷೆ ಹುಸಿಗೊಳಿಸಿದ ಚೊಚ್ಚಲ ಬಜೆಟ್: ಶಾಸಕ ಪ್ರಸಾದ ಅಬ್ಬಯ್ಯ 

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 14:56 IST
Last Updated 4 ಮಾರ್ಚ್ 2022, 14:56 IST
ಶಾಸಕ ಪ್ರಸಾದ ಅಬ್ಬಯ್ಯ
ಶಾಸಕ ಪ್ರಸಾದ ಅಬ್ಬಯ್ಯ   

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಚೊಚ್ಚಲ ಬಜೆಟ್ ಬಗ್ಗೆ ಇಟ್ಟುಕೊಂಡಿದ್ದ ಅಪಾರ ನಿರೀಕ್ಷೆ ಹುಸಿಯಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಪ್ರತಿಕ್ರಿಯಿಸಿದ್ದಾರೆ.

ಕಳೆದರೆಡು ವರ್ಷಗಳ ಹಿಂದೆ ಬಜೆಟ್‍ನಲ್ಲಿ ಘೋಷಿಸಿದ ಅನೇಕ ಯೋಜನೆಗಳು ಈವರೆಗೂ ಜಾರಿಯಾಗಿಲ್ಲ. ಹುಬ್ಬಳ್ಳಿ–ಧಾರವಾಡ ಪೂರ್ವ ಕ್ಷೇತ್ರದಲ್ಲಿ ಬಡ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪ್ರಥಮ ದರ್ಜೆ ಕಾಲೇಜು ಆರಂಭಿಸುವ ಬಗ್ಗೆ 2 ವರ್ಷಗಳಿಂದ ಪ್ರಸ್ತಾವ ಸಲ್ಲಿಸುತ್ತಿದ್ದರೂ ಬಜೆಟ್‍ನಲ್ಲಿ ಪ್ರಸ್ತಾಪವಾಗದಿರುವುದು ಹಾಗೂ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡದಿರುವುದು ಬೇಸರ ಮೂಡಿಸಿದೆ ಎಂದಿದ್ದಾರೆ.

ರೈತರ ಆರ್ಥಿಕ ಸ್ವಾವಲಂಬನೆಗೆ ಯಾವುದೇ ವಿಶೇಷ ಪ್ಯಾಕೇಜ್ ಇಲ್ಲ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವ ಬಗ್ಗೆ ಪ್ರಸ್ತಾಪಿಸಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಹೊಸ ಕೈಗಾರಿಕೆ ಸ್ಥಾಪಿಸುವ ಕುರಿತು ಘೋಷಣೆಗಳಿಲ್ಲ. ಆದರೆ, ₹250 ಕೋಟಿ ‌ವೆಚ್ಚದಲ್ಲಿ ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಯ ಕೇಂದ್ರ ಆರಂಭಿಸುವ ಬಗ್ಗೆ ಪ್ರಸ್ತಾಪಿಸಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

ADVERTISEMENT

ಒಟ್ಟಿನಲ್ಲಿ ಮುಂಬರುವ ಚುನಾವಣೆ ಉದ್ದೇಶದಿಂದ ಎಲ್ಲರನ್ನೂ ಸಂತುಷ್ಟಗೊಳಿಸುವ ಪ್ರಯತ್ನ ಮಾಡಿರುವುದನ್ನು ಬಿಟ್ಟರೆ ಬೊಮ್ಮಾಯಿ ಅವರ ಬಜೆಟ್‌ನಲ್ಲಿ ಅಚ್ಚರಿಪಡುವಂಥದ್ದು ಏನೂ ಇಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.