ADVERTISEMENT

ಫಲ ನೀಡಿದ ‘ಬೇಟಿ ಪಢಾವೊ’ ಯೋಜನೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2020, 20:00 IST
Last Updated 1 ಫೆಬ್ರುವರಿ 2020, 20:00 IST
   

ಎನ್‌ಡಿಎ ಸರ್ಕಾರದ ಮೊದಲ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ‘ಬೇಟಿ ಬಚಾವೊ, ಬೇಟಿ ಪಢಾವೊ’ ಯೋಜನೆಯು ಅತ್ಯುತ್ತಮ ಫಲ ನೀಡಿದೆ ಎಂದು ನಿರ್ಮಲಾ ಹೇಳಿದರು.

‘ಬೇಟಿ ಬಚಾವೊ, ಬೇಟಿ ಪಢಾವೊ’ ಅಭಿಯಾನದ ಪರಿಣಾಮವಾಗಿ ಶಿಕ್ಷಣದ ಎಲ್ಲಾ ಹಂತಗಳಲ್ಲೂ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಿದೆ.

ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಗಂಡುಮಕ್ಕಳ ಸಂಖ್ಯೆ ಶೇ 89.28ರಷ್ಟಿದ್ದರೆ, ಹೆಣ್ಣುಮಕ್ಕಳ ಸಂಖ್ಯೆ ಶೇ 94.32ರಷ್ಟಿದೆ.ಹಿರಿಯ ಪ್ರಾಥಮಿಕ ಹಂತದಲ್ಲಿ ಇದು ಕ್ರಮವಾಗಿ ಶೇ 78 ಹಾಗೂ ಶೇ 81.32ರಷ್ಟಿದೆ.

ADVERTISEMENT

ಪ್ರೌಢ ಶಿಕ್ಷಣ ಹಂತದಲ್ಲಿ ಹೆಣ್ಣುಮಕ್ಕಳ ಪ್ರಮಾಣವು ಶೇ 59.70 ರಷ್ಟಿದ್ದರೆ ಗಂಡುಮಕ್ಕಳ ಪ್ರಮಾಣ ಶೇ 57.54ರಷ್ಟಿದೆ ಎಂದು ನಿರ್ಮಲಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.