ADVERTISEMENT

Budget 2025: ಸರ್ಕಾರಿ ಶಾಲೆಗಳು, ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್‌ ಸೇವೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2025, 11:32 IST
Last Updated 1 ಫೆಬ್ರುವರಿ 2025, 11:32 IST
<div class="paragraphs"><p>ನಿರ್ಮಲಾ ಸೀತಾರಾಮನ್‌</p></div>

ನಿರ್ಮಲಾ ಸೀತಾರಾಮನ್‌

   

ನವದೆಹಲಿ: ದೇಶದ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ಸೇರಿದಂತೆ ಸಾರ್ವಜನಿಕ ಶಿಕ್ಷಣ, ಉತ್ತಮ ಆರೋಗ್ಯಕ್ಕಾಗಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್‌ ಘೋಷಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಇಂದು (ಶನಿವಾರ) ಸತತ ಎಂಟನೇ ಬಾರಿಗೆ ಬಜೆಟ್‌ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಇದಾಗಿದೆ.

ADVERTISEMENT

ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಾಲೆಗಳಲ್ಲಿ 50,000 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಭಾಷೆಯಲ್ಲಿ ವಿಷಯಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡಲು ‘ಭಾರತೀಯ ಭಾಷಾ ಪುಸ್ತಕ ಯೋಜನೆ’ಯನ್ನು ಜಾರಿಗೆ ತರಲಾಗುವುದು ಎಂದು ನಿರ್ಮಲಾ ಪ್ರಕಟಿಸಿದ್ದಾರೆ.

ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದರ ಭಾಗವಾಗಿ 2025-26 ಆರ್ಥಿಕ ವರ್ಷದಲ್ಲಿ 200 ಕೇಂದ್ರಗಳನ್ನು ತೆರೆಯಲಾಗುವುದು ಎಂದು ನಿರ್ಮಲಾ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.