ADVERTISEMENT

Budget 2025: ಸ್ವಚ್ಛ ಭಾರತ ಯೋಜನೆಗೆ ₹12,192 ಕೋಟಿ ಮೀಸಲು

ಪಿಟಿಐ
Published 1 ಫೆಬ್ರುವರಿ 2025, 13:28 IST
Last Updated 1 ಫೆಬ್ರುವರಿ 2025, 13:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಯೋಜನೆಗೆ ಈ ಬಜೆಟ್‌ನಲ್ಲಿ ₹12,192 ಕೋಟಿ ಅನುದಾನ ಮೀಸಲಿಡಲಾಗಿದೆ. ಕಳೆದ ವರ್ಷವೂ ಇಷ್ಟೇ ಮೊತ್ತವನ್ನು ಹಂಚಿಕೆ ಮಾಡಲಾಗಿತ್ತು. 

ಹಂಚಿಕೆ ಮಾಡಲಾದ ಅನುದಾನವನ್ನು ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶ ಎಂದು ವಿಂಗಡಣೆ ಮಾಡಲಾಗಿದ್ದು, ಗ್ರಾಮೀಣ ಪ್ರದೇಶದ ಸ್ವಚ್ಛ ಭಾರತ ಯೋಜನೆಗೆ ₹7,192 ಕೋಟಿ ಮತ್ತು ನಗರ ಕೇಂದ್ರಿತ ಯೋಜನೆಗೆ ₹5,000 ಕೋಟಿ ಹಂಚಿಕೆ ಮಾಡಲಾಗಿದೆ. 

ದೇಶವನ್ನು ಬಯಲು ಶೌಚಾಲಯ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ 2014ರ ಅಕ್ಟೋಬರ್‌ 2ರಂದು ಕೇಂದ್ರ ಸರ್ಕಾರ ಸ್ವಚ್ಛ ಭಾರತ ಯೋಜನೆಗೆ ಚಾಲನೆ ನೀಡಿತ್ತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.