ಐಸ್ಟೋಕ್ ಚಿತ್ರ
ನವದೆಹಲಿ: 2024ರ ಜುಲೈನಲ್ಲಿ ಮಂಡನೆಯಾದ ಬಜೆಟ್‌ನಲ್ಲಿ ಘೋಷಿಸಿದ ಪ್ರಧಾನ ಮಂತ್ರಿ ವೃತ್ತಿ ತರಬೇತಿ ಯೋಜನೆಯ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈಗಿರುವ ನಿಯಮಗಳ ಪ್ರಕಾರ ಈ ಯೋಜನೆಯಲ್ಲಿ ಭಾಗಿಯಾಗಲು 500 ಕಂಪನಿಗಳಿಗೆ ಅವಕಾಶ ಇದೆ. ಯೋಜನೆಯಲ್ಲಿ ಭಾಗಿಯಾಗಲು ಕಂಪನಿಗಳು ಹೊಂದಿರುವ ಅರ್ಹತೆಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಹೆಚ್ಚು ಮಾಡುವ ಉದ್ದೇಶದಿಂದ ಅವರ ಅರ್ಹತೆಗೆ ಸಂಬಂಧಿಸಿದ ನಿಯಮಗಳಲ್ಲಿಯೂ ಬದಲಾವಣೆ ತರುವ ಸಾಧ್ಯತೆ ಇದೆ. ಯೋಜನೆಯಲ್ಲಿನ ಬದಲಾವಣೆಗಳ ಬಗ್ಗೆ ಫೆಬ್ರುವರಿ 1ರಂದು ಮಂಡಿಸುವ ಬಜೆಟ್‌ನಲ್ಲಿ ಘೋಷಣೆ ಹೊರಡಿಸುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.