ADVERTISEMENT

ಬಜೆಟ್‌: ಪರಿಶಿಷ್ಟ ಪಂಗಡದ 5 ಸಾವಿರ ಯುವಕ-ಯುವತಿಯರಿಗೆ ಡ್ರೋನ್ ತರಬೇತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2024, 10:16 IST
Last Updated 16 ಫೆಬ್ರುವರಿ 2024, 10:16 IST
   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023–24 ನೇ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯುದಯಕ್ಕಾಗಿ ₹39,121 ಕೋಟಿ ‌ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಇದರಡಿಯಲ್ಲಿ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ-ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣ ಹಾಗೂ ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ ಕಲ್ಪಿಸಲಾಗುವುದು ಎಂದಿದ್ದಾರೆ.

ADVERTISEMENT

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಸೇರಿಂದತೆ ಇನ್ನಿತರ ಯೋಜನೆಗಳನ್ನಯ ಘೋಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.