ADVERTISEMENT

ಬಜೆಟ್: ಬೆಂಗಳೂರು ಸೇರಿ ಪ್ರಮುಖ ನಗರಗಳನ್ನು ಬೆಸೆಯುವ ಹೈಸ್ಪೀಡ್ ರೈಲು ಕಾರಿಡಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2026, 6:24 IST
Last Updated 1 ಫೆಬ್ರುವರಿ 2026, 6:24 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ನವದೆಹಲಿ: ಪ್ರಮುಖ ನಗರ ಮತ್ತು ಆರ್ಥಿಕ ಕೇಂದ್ರಗಳಲ್ಲಿ ಏಳು ಹೈ-ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಅಭಿವೃದ್ಧಿಪಡಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ADVERTISEMENT

‍ಪ್ರಯಾಣಿಕ ಹಾಗೂ ಪರಿಸರ ಸ್ನೇಹಿ ಸಾರಿಗೆಗೆ ಒತ್ತು ನೀಡುವಲ್ಲಿ ಈ ಕಾರಿಡಾರ್ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂಬೈ–ಪುಣೆ, ಪುಣೆ –ಹೈದರಾಬಾದ್, ಹೈದರಾಬಾದ್–ಬೆಂಗಳೂರು, ಹೈದರಾಬಾದ್–ಚೆನ್ನೈ, ಚೆನ್ನೈ–ಬೆಂಗಳೂರು, ದೆಹಲಿ–ವಾರಾಣಸಿ ಹಾಗೂ ವಾರಾಣಸಿ–ಸಿಲಿಗುರಿ ಪ್ರಸ್ತಾವಿತ ರೈಲು ಮಾರ್ಗಗಗಳು. ಇದು ಭಾರತದ ಹಣಕಾಸು ಹಬ್, ತಂತ್ರಜ್ಞಾನ ಕೇಂದ್ರ ಹಾಗೂ ಉತ್ಪಾದನಾ ಕ್ಲಸ್ಟರ್‌ಗಳನ್ನು ಬೆಸೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.