ನಿರ್ಮಲಾ ಸೀತಾರಾಮನ್
ನವದೆಹಲಿ: 2024–25ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣ, ಉದ್ಯೋಗ ಮತ್ತು ಕೌಶಲಾಭಿವೃದ್ಧಿ ಕ್ಷೇತ್ರಕ್ಕೆ ₹1.48 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ಸಚಿವೆ, ‘ಇದರಿಂದ ಉದ್ಯೋಗ, ಕೌಶಲಾಭಿವೃದ್ಧಿ, ಸೂಕ್ಷ್ಮ, ಸಣ್ಣ ಮತ್ತು ಉದ್ಯಮ (ಎಂಎಸ್‌ಎಂಇ) ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ತಿಳಿಸಿದರು.
ಇದರ ಜತೆಗೆ ದೇಶದ 80 ಕೋಟಿ ಜನರಿಗೆ ಅನೂಕೂಲವಾಗಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಐದು ವರ್ಷಗಳ ವಿಸ್ತರಿಸಲಾಗುವುದು ಎಂದರು.
ಈ ಹಿಂದೆ ಮಧ್ಯಂತರ ಬಜೆಟ್‌ನಲ್ಲಿ ಉಲ್ಲೇಖಿಸಿದಂತೆ ಬಡವರು, ಮಹಿಳೆಯರು, ಯುವಜನತೆ ಮತ್ತು ರೈತ ವರ್ಗದ ಮೇಲೆ ಹೆಚ್ಚು ಗಮನಹರಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.