ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ದೇಶದ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸವಾಲುಗಳಿಗೆ ಪರಿಹಾರ ಒದಗಿಸದ ಬಜೆಟ್ ಇದಾಗಿದೆ ಎಂದು ಕೇಂದ್ರ ಬಜೆಟ್ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಯಾವುದೇ ದೂರದೃಷ್ಟಿ, ಇಚ್ಛಾಶಕ್ತಿ ಇಲ್ಲದ ಬಜೆಟ್ ಇದಾಗಿದೆ ಎಂದು ಕಿಡಿಕಾರಿದ್ದಾರೆ.
ಮಿಷನ್ ಮೋಡ್ ಈಗ ಚಾಲೆಂಜ್ ರೂಟ್ ಆಗಿದೆ. ರಿಫಾರ್ಮ್ ಎಕ್ಸ್‌ಪ್ರೆಸ್ ಈಗ ಜಂಕ್ಷನ್‌ಗಳಲ್ಲಿ ನಿಲ್ಲುತ್ತಿದೆ. ಯಾವುದೇ ದೂರದೃಷ್ಟಿ, ರಾಜಕೀಯ ಇಚ್ಛಾಶಕ್ತಿ ಈ ಬಜೆಟ್‌ನಲ್ಲಿ ಇಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.
ರೈತರು ಆದಾಯ ಭದ್ರತಾ ಯೋಜನೆಗಳನ್ನು ನಿರೀಕ್ಷಿಸುತ್ತಿದ್ದರು. ಬಜೆಟ್‌ನಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸೇರಿದಂತೆ ಯಾವ ಸಮುದಾಯಗಳಿಗೂ ಯಾವುದೇ ಬೆಂಬಲ ಒದಗಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಈ ಬಜೆಟ್‌ನಿಂದ ರಾಜ್ಯ ಸರ್ಕಾರಗಳಿಗೆ ಅನುಕೂಲ ಆದಂತೆ ಕಾಣುತ್ತಿಲ್ಲ. ಒಕ್ಕೂಟ ವ್ಯವಸ್ಥೆ ಬಲಿಪಶುವಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.
ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.