ADVERTISEMENT

Budget 2025 | ಜನರ ಆಕಾಂಕ್ಷೆ ಈಡೇರಿಸಲು ಸರ್ಕಾರದ ಬದ್ಧತೆ ಪ್ರದರ್ಶನ: ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2025, 10:22 IST
Last Updated 1 ಫೆಬ್ರುವರಿ 2025, 10:22 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

–ರಾಯಿಟರ್ಸ್ ಚಿತ್ರ

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸುವ ನಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ADVERTISEMENT

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು (ಶನಿವಾರ) ಸತತ ಎಂಟನೇ ಬಾರಿಗೆ ಬಜೆಟ್‌ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಇದಾಗಿದೆ.

ಬಜೆಟ್‌ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ‘ಬಜೆಟ್‌ನಲ್ಲಿ ಉಳಿತಾಯ, ಹೂಡಿಕೆ, ಬಳಕೆ ಮತ್ತು ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ಸಿಗುವಂತಹ ಹಲವು ಅಂಶಗಳಿವೆ. ಜತೆಗೆ, ಗಿಗ್ ಕಾರ್ಮಿಕರ ಕಲ್ಯಾಣ ಕ್ರಮಗಳು ಕಾರ್ಮಿಕರ ಘನತೆಗೆ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುತ್ತವೆ’ ಎಂದಿದ್ದಾರೆ.

‘ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜತೆಗೆ, ಸಾಮಾನ್ಯ ಪ್ರಜೆಯ ಜೇಬು ತುಂಬಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ‘ವಿಕಸಿತ ಭಾರತ’ದ ನಮ್ಮ ಧ್ಯೇಯವನ್ನು ಸಾಮಾನ್ಯ ಜನರು ಕೊಂಡೊಯ್ಯುತ್ತಾರೆ ಎಂಬುದಕ್ಕೆ ಇದುವೇ ಸಾಕ್ಷಿ’ ಎಂದು ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.