ನಿರ್ಮಲಾ ಸೀತಾರಾಮನ್
(ಪಿಟಿಐ ಚಿತ್ರ)
ನವದೆಹಲಿ: ಭಾರತದ ಆರ್ಥಿಕತೆ ವಿಶ್ವದಲ್ಲೇ ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸಂಸತ್ತಿನಲ್ಲಿ ದಾಖಲೆಯ ಸತತ ಎಂಟನೇ ಸಲ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್ ನೂತನ ದಾಖಲೆ ಬರೆದಿದ್ದಾರೆ.
'ಕಳೆದ 10 ವರ್ಷಗಳಲ್ಲಿ ನಮ್ಮ ಅಭಿವೃದ್ಧಿ ಹಾಗೂ ರಚನಾತ್ಮಕ ಸುಧಾರಣೆಗಳು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿವೆ' ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಉಲ್ಲೇಖಿಸಿದ್ದಾರೆ.
'ಎಲ್ಲರನ್ನು ಒಳಗೊಂಡಂತೆ ಅಭಿವೃದ್ಧಿಪಥದತ್ತ ಸಾಗುವ ಬಜೆಟ್ ಮಂಡಿಸುವ ಪ್ರಯತ್ನ ಮುಂದುವರಿದಿದೆ' ಎಂದು ಅವರು ಒತ್ತಿ ಹೇಳಿದ್ದಾರೆ.
'ವಿಕಸಿತ ಭಾರತ'ದ ಮೂಲಕ ಬಡತನ ಮುಕ್ತ ಭಾರತ, ಗುಣಮಟ್ಟದ ಶಿಕ್ಷಣ, ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಸಮಗ್ರ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುತ್ತೇವೆ' ಎಂದು ತಿಳಿಸಿದ್ದಾರೆ.
'ಮುಂದಿನ ಐದು ವರ್ಷಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸಲು ಎದುರು ನೋಡುತ್ತಿದ್ದೇವೆ' ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.