ADVERTISEMENT

ಯಡಿಯೂರಪ್ಪ ಬಜೆಟ್‌ನಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯ: ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 8:49 IST
Last Updated 5 ಮಾರ್ಚ್ 2020, 8:49 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹುರುಪಿನಲ್ಲಿ ಸರ್ಕಾರ ಮಾಡಿದರು. ಆದರೆ, ಆದರಂತೆ ಬಜೆಟ್‌ ಮಂಡನೆ ಮಾಡಿಲ್ಲ. ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಆರ್ಥಿಕತೆ ಸರಿಯಿಲ್ಲ ಎಂಬುದನ್ನು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದು, ಬಜೆಟ್‌ನಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ’ ಎಂದು ತಿಳಿಸಿದರು.

ಯಡಿಯೂರಪ್ಪ ಇವರೆಗೂ ಮಂಡಿಸಿದ್ದ ಏಳು ಬಜೆಟ್‌ಗಳಲ್ಲಿ ಈ ಬಾರಿಯ ಬಜೆಟ್‌ ಕಳೆಗುಂದಿದ ಬಜೆಟ್‌ ಆಗಿದೆ ಎಂದು ವ್ಯಂಗ್ಯವಾಡಿದರು.

ADVERTISEMENT

ಕಾಂಗ್ರೆಸ್‌ ಸರ್ಕಾರಗಳ ಅವಧಿಗಳಲ್ಲಿ ಜಾರಿಗೆ ತಂದಿದ್ದ ಯೋಜನೆಗಳಿಗೆ ಈ ಸರ್ಕಾರ ಹೊಸ ಹೆಸರುಗಳನ್ನು ಸೂಚಿಸಿದೆ ಹೊರೆತು ಬೇರೆನೂ ಇಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಲಂಬಾಣಿ ಸಮುದಾಯವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಹಸಿರು ಶಾಲು ಹಾಕಿಕೊಂಡ ಮಾತ್ರಕ್ಕೆ ರೈತರ ಪರ ಅಂತಲ್ಲ ಎಂದು ಯಡಿಯೂರಪ್ಪ ಅವರನ್ನು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.