ನವದೆಹಲಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಮತ್ತೆ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದಾರೆ.
ಮುಂದಿನ ಕೆಲ ತಿಂಗಳುಗಳಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ನಮ್ಮ ಅತ್ಯದ್ಭುತ ಕೆಲಸವನ್ನು ಕಂಡಿರುವ ಜನರು ಮತ್ತೆ ನಮಗೆ ಬಹುಮತ ನೀಡಲಿದ್ದಾರೆ ಎಂಬ ವಿಶ್ವಾವಿದೆ ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಹೇಳಿದರು.
ಕೋವಿಡ್–19 ಸವಾಲುಗಳನ್ನು ಎದುರಿಸಿ ಆತ್ಮನಿರ್ಭರ ಭಾರತವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬುನಾದಿ ಹಾಕಲಾಗಿದೆ ಎಂದು ಹೇಳಿದರು.
2014ರಲ್ಲಿ ಮೋದಿ ಸರ್ಕಾರ ಅಧಿಕಾರ ಬಂದಾಗ ಬಹಳಷ್ಟು ಸವಾಲುಗಳು ಸರ್ಕಾರದ ಮುಂದಿದ್ದವು. ಅವುಗಳನ್ನು ಮೀರಿ ರಚನಾತ್ಮಕ ಹಾದಿಯಲ್ಲಿ ಸರ್ಕಾರ ಮುನ್ನಡೆದಿದೆ ಎಂದು ಅವರು ಹೇಳಿದ್ದಾರೆ.
ಮೋದಿ ನೇತೃತ್ವದ ಸರ್ಕಾರವು ಸಮಾಜದಲ್ಲಿರುವ ಅಸಮಾನತೆಯನ್ನು ವ್ಯವಸ್ಥಿತವಾಗಿ ಹೋಗಲಾಡಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.