ADVERTISEMENT

ಚಿನ್ನ- ಬೆಳ್ಳಿ: ಈ ವರ್ಷ ಯಾವುದು ಏರಿಕೆ, ಯಾವುದು ಇಳಿಕೆ? ಇಲ್ಲಿದೆ ಮಾಹಿತಿ

ಪಿಟಿಐ
Published 31 ಜನವರಿ 2025, 11:18 IST
Last Updated 31 ಜನವರಿ 2025, 11:18 IST
<div class="paragraphs"><p>ಚಿನ್ನ, ಬೆಳ್ಳಿ ದರ</p></div>

ಚಿನ್ನ, ಬೆಳ್ಳಿ ದರ

   

ನವದೆಹಲಿ: ಪ್ರಸಕ್ತ ವರ್ಷದಲ್ಲಿ ಚಿನ್ನದ ಧಾರಣೆಯು ಇಳಿಕೆಯಾಗಲಿದೆ. ಆದರೆ, ಬೆಳ್ಳಿ ದರವು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಸಂಸತ್‌ನಲ್ಲಿ ಶುಕ್ರವಾರ ಮಂಡಿಸಿರುವ 2024–25ನೇ ಸಾಲಿನ ಆರ್ಥಿಕ ಸಮೀಕ್ಷೆ ಹೇಳಿದೆ.

ಜಾಗತಿಕ ಮಟ್ಟದಲ್ಲಿ ಪ್ರಸಕ್ತ ವರ್ಷ ಸರಕುಗಳ ಬೆಲೆಯು ಶೇ 5.1ರಷ್ಟು ಹಾಗೂ 2026ರಲ್ಲಿ ಶೇ 1.7ರಷ್ಟು ಇಳಿಕೆಯಾಗಲಿದೆ ಎಂದು ವಿಶ್ವಬ್ಯಾಂಕ್‌ ಪ್ರಕಟಿಸಿರುವ ಸರಕು ಮಾರುಕಟ್ಟೆಯ ಮುನ್ನೋಟವನ್ನು ಆರ್ಥಿಕ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ. 

ADVERTISEMENT

ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಲಿದೆ. ಆದರೆ, ತಾತ್ಕಾಲಿಕವಾಗಿ ನೈಸರ್ಗಿಕ ಅನಿಲದ ಬೆಲೆಯಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ವ್ಯಾಪಾರ ಅನಿಶ್ಚಿತತೆ:

ದೇಶದ ಆರ್ಥಿಕ ಬೆಳವಣಿಗೆ ದರದ ಮೇಲೆ ಜಾಗತಿಕ ಬಿಕ್ಕಟ್ಟುಗಳು ಪರಿಣಾಮ ಬೀರಲಿವೆ. ವ್ಯಾಪಾರ ವಹಿವಾಟಿನ ಅನಿಶ್ಚಿತತೆ ಮುಂದುವರಿಯಲಿದೆ ಎಂದು ಪ್ರಸ್ತಾಪಿಸಲಾಗಿದೆ.

ಸರ್ಕಾರವು 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ಸೇರ್ಪಡೆಗೊಳಿಸುವ ಗುರಿ ಹೊಂದಿದೆ. ಈ ಗುರಿ ಸಾಧನೆಗಾಗಿ ಜಿಡಿಪಿಯು ವಾರ್ಷಿಕವಾಗಿ ಶೇ 8ರಷ್ಟು ಪ್ರಗತಿ ಸಾಧಿಸಬೇಕಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶದಲ್ಲಿ ಬಂಡವಾಳ ಹೂಡಿಕೆ ದರವು ಜಿಡಿಪಿಯು ಶೇ 31ರಷ್ಟಿದೆ. ಇದನ್ನು ಶೇ 35ಕ್ಕೆ ಹೆಚ್ಚಿಸಬೇಕಿದೆ. ತಯಾರಿಕಾ ವಲಯದ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಬೇಕಿದೆ. ಕೃತಕ ಬುದ್ಧಿಮತ್ತೆ, ರೋಬಾಟಿಕ್ಸ್‌ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಹೇಳಿದೆ.

2030ರೊಳಗೆ ಕೃಷಿಯೇತರ ವಲಯದಲ್ಲಿ ವಾರ್ಷಿಕವಾಗಿ 78.5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕಿದೆ ಎಂದು ಹೇಳಿದೆ.

ಜಾಗತಿಕ ಬಿಕ್ಕಟ್ಟಿನಿಂದಾಗಿ ಹಣದುಬ್ಬರ ಏರಿಕೆಯಾಗಲಿದೆ. 2023ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಶೇ 5.4ರಷ್ಟಿದ್ದ ಚಿಲ್ಲರೆ ಹಣದುಬ್ಬರವು, ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ 5.4ಕ್ಕೆ ಇಳಿಕೆಯಾಗಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.