ADVERTISEMENT

Budget 2023: ಬಜೆಟ್‌ನಲ್ಲಿ ಬ್ಯಾಂಕ್‌ಗಳಿಗೆ ನೆರವು ಅನುಮಾನ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 4:07 IST
Last Updated 1 ಫೆಬ್ರುವರಿ 2023, 4:07 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಆರ್ಥಿಕ ಸ್ಥಿತಿಯು ಸುಧಾರಿಸುತ್ತಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಅವುಗಳ ಒಟ್ಟು ನಿವ್ವಳ ಲಾಭವು ₹ 1 ಲಕ್ಷ ಕೋಟಿ ಆಗುವ ನಿರೀಕ್ಷೆ ಇದೆ. ಹೀಗಾಗಿ ಕೇಂದ್ರ ಸರ್ಕಾರವು 2023–24ನೇ ಸಾಲಿನ ಬಜೆಟ್‌ನಲ್ಲಿ ಬಂಡವಾಳ ನೆರವು ಘೋಷಣೆ ಮಾಡುವುದು ಅನುಮಾನ ಎಂದು ಮೂಲಗಳು ಹೇಳಿವೆ.

ಬ್ಯಾಂಕ್‌ಗಳ ಬಂಡವಾಳ ಲಭ್ಯತೆ ಪ್ರಮಾಣವು ಅಗತ್ಯಕ್ಕಿಂತಲೂ ಹೆಚ್ಚಿಗೆ ಇದ್ದು, ಶೇ 14 ರಿಂದ ಶೇ 20ರ ಒಳಗೆ ಇದೆ. ಮಾರುಕಟ್ಟೆಯಿಂದ ಬಂಡವಾಳ ಸಂಗ್ರಹ ಮಾಡುತ್ತಿರುವುದಷ್ಟೇ ಅಲ್ಲದೆ, ಪ್ರಮುಖವಲ್ಲದ ಆಸ್ತಿಗಳನ್ನು ಸಹ ಮಾರಾಟ ಮಾಡುತ್ತಿವೆ ಎಂದು ತಿಳಿಸಿವೆ.

ಕೇಂದ್ರ ಸರ್ಕಾರವು ಈ ಹಿಂದೆ 2021–22ರಲ್ಲಿ ಬ್ಯಾಂಕ್‌ಗಳಿಗೆ ₹20 ಸಾವಿರ ಕೋಟಿ ನೆರವು ನೀಡಿತ್ತು. 2016–17 ರಿಂದ 2020–21ರ ಅವಧಿಯಲ್ಲಿ ಸರ್ಕಾರಿ ಬ್ಯಾಂಕ್‌ಗಳಿಗೆ ಒಟ್ಟು ₹3.10 ಲಕ್ಷ ಕೋಟಿ ಬಂಡವಾಳ ನೆರವನ್ನು ಸರ್ಕಾರ ನೀಡಿದೆ.

ADVERTISEMENT

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರುವರಿ 1ರಂದು ಬಜೆಟ್‌ ಮಂಡಿಸಲಿದ್ದಾರೆ. ಸರ್ಕಾರಿ ಸ್ವಾಮ್ಯದ 12 ಬ್ಯಾಂಕ್‌ಗಳು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು ₹15,306 ಕೋಟಿ ಲಾಭ ಗಳಿಸಿವೆ. ಎರಡನೇ ತ್ರೈಮಾಸಿಕದ ಲಾಭವು ₹25,685 ಕೋಟಿ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.