ಬಜೆಟ್ ಪ್ರತಿಯೊಂದಿಗೆ ನಿರ್ಮಲಾ ಸೀತಾರಾಮನ್
–ಸಂಗ್ರಹ ಚಿತ್ರ
ನವದೆಹಲಿ: ದೇಶದ ವಿಮಾ ವಲಯದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು (ಎಫ್‌ಡಿಐ) ಶೇಕಡ 100ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಈ ಬಾರಿಯ ಬಜೆಟ್‌ನಲ್ಲಿ ಇದೆ. ಹಣಕಾಸು ವಲಯಕ್ಕೆ ಸಂಬಂಧಿಸಿದ ಹೊಸ ಸುಧಾರಣೆಗಳ ಭಾಗವಾಗಿ ಈ ಕ್ರಮ ಎಂದು ಕೇಂದ್ರ ಹೇಳಿದೆ.
ವಿಮಾ ಕ್ಷೇತ್ರದಲ್ಲಿ ಎಫ್‌ಡಿಐ ಮಿತಿಯನ್ನು ಈಗಿನ ಶೇ 74ರ ಬದಲಾಗಿ, ಶೇ 100ಕ್ಕೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
‘ಪ್ರೀಮಿಯಂ ಮೊತ್ತವನ್ನು ಸಂಪೂರ್ಣವಾಗಿ ಭಾರತದಲ್ಲಿ ತೊಡಗಿಸುವ ಕಂಪನಿಗಳಿಗೆ ಮಾತ್ರ ಈ ಹೆಚ್ಚುವರಿ ಎಫ್‌ಡಿಐ ಮಿತಿಯ ಪ್ರಯೋಜನ ಸಿಗುತ್ತದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಿತಿಯನ್ನು ಹೆಚ್ಚಿಸುವುದಕ್ಕಾಗಿ ಕೇಂದ್ರವು ವಿಮಾ ಕಾಯ್ದೆ 1938, ಜೀವ ವಿಮಾ ನಿಗಮ ಕಾಯ್ದೆ – 1956 ಮತ್ತು ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 1999ಕ್ಕೆ ತಿದ್ದುಪಡಿ ತರಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.