ADVERTISEMENT

ಅನುದಾನದಲ್ಲಿ ಸುಣ್ಣ– ಬಣ್ಣ ಬಳಿಯುವುದಕ್ಕೂ ಸಾಧ್ಯವಿಲ್ಲ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 10:52 IST
Last Updated 5 ಮಾರ್ಚ್ 2020, 10:52 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ‘ಆರೋಗ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಜೆಟ್‌ನಲ್ಲಿ ಘೋಷಿಸಿರುವ ಅನುದಾನ ಸಾಕಾಗುವುದಿಲ್ಲ. ಆದರಲ್ಲಿ ಆಸ್ಪತ್ರೆಗಳಿಗೆ ಸುಣ್ಣ– ಬಣ್ಣ ಬಳಿಯುವುದಕ್ಕೂ ಸಾಧ್ಯವಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಲವು ಸವಾಲುಗಳ ನಡುವೆಯೂ ರಾಜ್ಯದ ತೆರಿಗೆ ಸಂಗ್ರಹ ಪರಿಸ್ಥಿತಿ ಉತ್ತಮವಾಗಿದೆ. ಕಳೆದ ಬಾರಿ ನಾವು ಬಜೆಟ್‌ ಮಂಡನೆ ವೇಳೆ ನಾವು ನಿರೀಕ್ಷೆ ಮಾಡಿದಷ್ಟು ಶೇ 14ರಷ್ಟು ತೆರಿಗೆ ಹೆಚ್ಚಿಗೆ ಸಂಗ್ರಹವಾಗಿದೆ’ ಎಂದು ಹೇಳಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನೇ ಇನ್ನುಮುಂದುವರಿಸಲಾಗಿದೆ. ಅಲ್ಲದೆ ಈ ಬಾರಿಮಂಡಿಸಲಾದಘೋಷಣೆಗಳಲ್ಲಿ ಸ್ಪಷ್ಟತೆ ಇಲ್ಲ.ಬಿಜೆಪಿಯವರಿಂದಹೊಸ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಿಲ್ಲಎಂದು ತಿಳಿಸಿದರು.

ಕೇಂದ್ರದಿಂದ ರಾಜ್ಯಕ್ಕೆಸಿಗಬೇಕಾದತೆರಿಗೆ ಪಾಲು ಸಿಗುತ್ತೊ ಇಲ್ಲವೊ ಎಂಬ ಅನುಮಾನ ರಾಜ್ಯ ಸರ್ಕಾರಕ್ಕೆ ಇದೆ ಎಂದು ಹೇಳಿದರು.

ಸರ್ಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬುದನ್ನು ಯಡಿಯೂರಪ್ಪನವರೇ ಹೇಳಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ನಿರುಪಯೋಗಿ ಬಜೆಟ್‌: ಎಚ್‌ಡಿಕೆ ಟೀಕೆ
ರಾಮನಗರ:
‘ಯಡಿಯೂರಪ್ಪನವರ ಸರ್ಕಾರದ ಈ ಬಾರಿಯ ಬಜೆಟ್‌ನಿಂದ ಯಾರಿಗೂ ಉಪಯೋಗವಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು.

ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಯಡಿಯೂರಪ್ಪನವರ ಮಂತ್ರಿಮಂಡಲದ ಸಚಿವರನ್ನು ಕೇಳಿದರೇ ಈ ಬಗ್ಗೆ ಉತ್ತರ ಕೊಡುತ್ತಾರೆ. ಅವರಿಗೇ ಬಜೆಟ್ ಬಗ್ಗೆ ವಿಶ್ವಾಸವಿಲ್ಲ. ಯಾರಿಗೂ ಖುಷಿ ಇಲ್ಲದ ಬಜೆಟ್‌ ಇದು’ ಎಂದು ಪ್ರತಿಕ್ರಿಯಿಸಿದರು.

ಸರ್ಕಾರ ಅಸ್ಥಿರಗೊಳಿಸಲ್ಲ: ‘ಸರ್ಕಾರ ಅಸ್ಥಿರಗೊಳಿಸುವ ಯಾವುದೇ ಗುಂಪುಗಳ ಜೊತೆ ನಾನು ಭಾಗಿಯಾಗಿಲ್ಲ’ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.

‘ಮುರುಗೇಶ ನಿರಾಣಿ ಭೇಟಿ ಆಕಸ್ಮಿಕ. ನನ್ನ ಅವರ ನಡುವೆ ಯಾವುದೇ ಚರ್ಚೆ ಆಗಿಲ್ಲ. ಜನರು ನಾನು ಮಾಡಿದ ಕೆಲಸ ನೆನಪಿಟ್ಟುಕೊಂಡು ಮತ್ತೆ ಅಧಿಕಾರ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ಮತ್ತೆ ಚನ್ನಪಟ್ಟಣದಿಂದಲೇ ಸ್ಪರ್ಧಿಸಿ ಇಲ್ಲಿಂದಲೇ ಮುಖ್ಯಮಂತ್ರಿ ಆಗುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.