
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಭಾನುವಾರ) ಸತತ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿದೆ ಎಂಬುದು ನೋಡುವುದಾದರೆ..
* ಭಾರತವನ್ನು ವೈದ್ಯಕೀಯ ಪ್ರವಾಸೋದ್ಯಮ ಕೇಂದ್ರವಾಗಿ ಉತ್ತೇಜಿಸುವ ನಿಟ್ಟಿನಲ್ಲಿ ಖಾಸಗಿ ವಲಯದ ಸಹಭಾಗಿತ್ವದಲ್ಲಿ ಐದು ಪ್ರಾದೇಶಿಕ ವೈದ್ಯಕೀಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
*ಮುಂದಿನ ಐದು ವರ್ಷಗಳಲ್ಲಿ ಆಪ್ಟೋಮೆಟ್ರಿ, ರೇಡಿಯಾಲಜಿ, ಅರಿವಳಿಕೆ ಮತ್ತು ಅನ್ವಯಿಕ ಮನೋವಿಜ್ಞಾನ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸುಮಾರು 1 ಲಕ್ಷ ಅಲೈಡ್ ಹೆಲ್ತ್ ಪ್ರೊಫೆಷನಲ್ಸ್‌ಗಳನ್ನು (ಎಎಚ್‌ಪಿ ) ಸೇರ್ಪಡೆ ಮಾಡಿಕೊಳ್ಳಲಾಗುವುದು.
*ನೂತನ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು.
*ಗುಣಮಟ್ಟದ ಆಯುರ್ವೇದ ಉತ್ಪನ್ನಗಳ ರಫ್ತುನ್ನು ಉತ್ತೇಜಿಸುವುದರ ಮೂಲಕ ಗಿಡಮೂಲಿಕೆ ಬೆಳೆಯುವ ರೈತರ ಹಾಗೂ ಉತ್ಪನ್ನಗಳನ್ನು ಸಂಸ್ಕರಿಸುವ ಉದ್ಯಮಗಳಿಗೆ ಸಹಾಯ ಒದಗಿಸುವುದು.
* ಉನ್ನತ ಗುಣಮಟ್ಟದ ಆಯುಷ್ ಔಷಧಾಲಯಗಳು ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ನುರಿತ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು.
* ಜಾಮ್‌ನಗರದಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯೂಎಚ್‌ಒ) ಜಾಗತಿಕ ಸಾಂಪ್ರದಾಯಿಕ ಔಷಧ ಕೇಂದ್ರವನ್ನು ಉನ್ನತೀಕರಿಸಲಾಗುವುದು.
* ವೃದ್ಧಾಪ್ಯಕ್ಕೆ ಸಂಬಂಧಿಸಿದ ಆರೈಕೆ ಸೇವೆ ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸ ಲಾಗುವುದು. 1.5 ಲಕ್ಷ ಆರೈಕೆದಾರರಿಗೆ ತರಬೇತಿ ನೀಡಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
* ನೂತನವಾಗಿ ಸ್ಥಾಪಿಸುವ ಪ್ರಾದೇಶಿಕ ವೈದ್ಯಕೀಯ ಕೇಂದ್ರಗಳಲ್ಲಿ ವೈದ್ಯಕೀಯ, ಶೈಕ್ಷಣಿಕ ಮತ್ತು ಸಂಶೋಧನಾ ಸೌಲಭ್ಯಗಳನ್ನು ಒದಗಿಸಲಾಗುವುದು.
* ಕೋವಿಡ್ ಬಳಿಕ ಆಯುರ್ವೇದ ಚಿಕಿತ್ಸಾ ಪದ್ಧತಿ ಮನ್ನಣೆ ಪಡೆದುಕೊಂಡಿದೆ ಎಂದೂ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.