ನವದೆಹಲಿ: ಸದ್ಯ ಆಹಾರ ಮತ್ತು ಇಂಧನ ಬೆಲೆ ಏರಿಕೆಯಾಗಿದೆ. ಇದರಿಂದ ಗ್ರಾಹಕರಿಗೆ ಹೊರೆಯಾಗಿದೆ. ಹಾಗಾಗಿ, 2025–26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಆಹಾರ, ರಸಗೊಬ್ಬರ ಮತ್ತು ಅಡುಗೆ ಅನಿಲ ಸಿಲಿಂಡರ್‌ಗೆ ನೀಡುವ ಸಬ್ಸಿಡಿ ಮೊತ್ತವನ್ನು ಶೇ 8ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಸಂಸತ್‌ನಲ್ಲಿ ಬಜೆಟ್ ಮಂಡಿಸಲಿದ್ದು, ಸುಮಾರು ₹4 ಲಕ್ಷ ಕೋಟಿ ಸಬ್ಸಿಡಿ ನೀಡುವ ಸಾಧ್ಯತೆಯಿದೆ ಎಂದು ಹೇಳಿವೆ.
ನಗರ ಪ್ರದೇಶದಲ್ಲಿ ದಿನಬಳಕೆಯ ವೆಚ್ಚದ ಪ್ರಮಾಣ ಕಡಿಮೆಯಾಗಿದೆ. ಕಂಪನಿಗಳ ಹೂಡಿಕೆಯೂ ಇಳಿಕೆಯಾಗಿದೆ. ಇದು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ನಿಧಾನಗತಿ ಬೆಳವಣಿಗೆಗೆ ಕಾರಣವಾಗಿದೆ. ಸಬ್ಸಿಡಿ ಪಾಲಿನಲ್ಲಿ ಗ್ರಾಮೀಣ ಪ್ರದೇಶದ ಪಾಲು ಹೆಚ್ಚಿದೆ. ಗ್ರಾಮೀಣ ದಿನಬಳಕೆಯ ವೆಚ್ಚದ ಏರಿಕೆಗೆ ಸಬ್ಸಿಡಿ ಸಹಕಾರಿಯಾಗಲಿದೆ ಎಂದು ಹೇಳಿವೆ.
ಕಳೆದ ಆರ್ಥಿಕ ವರ್ಷದಲ್ಲಿ ಸರ್ಕಾರವು ಆಹಾರಕ್ಕೆ ₹2 ಲಕ್ಷ ಕೋಟಿ ಸಬ್ಸಿಡಿ ನೀಡಿತ್ತು. ಇದನ್ನು ₹2.14 ಲಕ್ಷ ಕೋಟಿಗೆ ಹೆಚ್ಚಿಸುವ ಸಾಧ್ಯತೆಯಿದೆ. ಅಡುಗೆ ಅನಿಲಕ್ಕೆ ₹25 ಸಾವಿರ ಹಾಗೂ ರಸಗೊಬ್ಬರಕ್ಕೆ ₹1.90 ಲಕ್ಷ ಕೋಟಿ ಸಬ್ಸಿಡಿ ನೀಡುವ ಸಾಧ್ಯತೆಯಿದೆ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.