ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಮಧ್ಯಂತರ ಬಜೆಟ್ ಆಗಿರುವುದರಿಂದ ಯಾವುದೇ ಹೊಸ ಯೋಜನೆಗಳು ಇರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿಯಡಿ ತೆರಿಗೆದಾರರಿಗೆ ಯಾವುದೇ ವಿನಾಯಿತಿ ಪ್ರಕಟಿಸುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ. ಬಜೆಟ್ ಟ್ಯಾಬ್ಲೆಟ್ ಹಿಡಿದು ನಿರ್ಮಲಾ ಸೀತಾರಾಮನ್ ಸದನಕ್ಕೆ ಆಗಮಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.