ನವದೆಹಲಿ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿರುವ ಜಲ ಜೀವನ್ ಮಿಷನ್ ಅನ್ನು 2028ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2025–26ನೇ ಸಾಲಿನ ಬಜೆಟ್ ಮಂಡಿಸಿದ ವೇಳೆ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಜಲ ಜೀವನ್ ಮಿಷನ್ ಅಡಿಯಲ್ಲಿ ಭಾರತದ ಗ್ರಾಮೀಣ ಜನಸಂಖ್ಯೆಯ 80 ಪ್ರತಿಶತವನ್ನು ಪ್ರತಿನಿಧಿಸುವ 15 ಕೋಟಿ ಕುಟುಂಬಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಲಾಗಿದೆ. ಪ್ರತಿಶತ 100ರಷ್ಟು ವ್ಯಾಪ್ತಿಯನ್ನು ಸಾಧಿಸಲು 2028ರವರೆಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಇದಕ್ಕಾಗಿ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಮೊದಲು 2024ರ ವೇಳೆಗೆ ಈ ಯೋಜನೆಯ ಅಡಿಯಲ್ಲಿ ದೇಶದ ಎಲ್ಲಾ ಗ್ರಾಮೀಣ ಕುಟುಂಬಗಳಿಗೂ ನಲ್ಲಿ ನೀರಿನ ಸಂಪರ್ಕ ಒದಗಿಸುವ ಗುರಿಯನ್ನು ಹೊಂದಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.