ADVERTISEMENT

ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಸಿಕ್ಕ 13 ಪ್ರಮುಖ ಕೊಡುಗೆಗಳು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 10:04 IST
Last Updated 5 ಮಾರ್ಚ್ 2020, 10:04 IST
   

ಬೆಂಗಳೂರು: ಮುಖ್ಯಮಂತ್ರಿಯಡಿಯೂರಪ್ಪ ಅವರು 2020–21ನೇ ಸಾಲಿನಲ್ಲಿ ಬಜೆಟ್‌ ಮಂಡಿಸಿದರು. ಈ ಬಾರಿಯ ಅಯವ್ಯಯದಲ್ಲಿ ಜನಸಾಮಾನ್ಯರಿಗೆ ಸಿಕ್ಕ 13 ಪ್ರಮುಖ ಕೊಡುಗೆಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

1) ಎಲ್ಲಾ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ

2)1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ₹ 5 ಕೋಟಿಅನುದಾನ.

ADVERTISEMENT

3)ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ

4)ಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು ₹ 2500 ಕೋಟಿ.

5)ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಜೀವನೋಪಾಯ ರೂಪಿಸಿಕೊಳ್ಳಲು “ಉಪಕಾರ” ಯೋಜನೆಯಡಿ ಮೂರು ವರ್ಷ ಅವಧಿಗೆ ಮಾಸಿಕ ₹ 5000 ನೆರವು.

6)ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು ₹ 60 ಲಕ್ಷಅನುದಾನ

7)500 ಅಂಧ ವಿದ್ಯಾರ್ಥಿಗಳಿಗೆ ತಲಾ ₹ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‍ಗಳನ್ನೊಳಗೊಂಡ ಕಿಟ್ ವಿತರಣೆ.

8)ಅಂಧ ತಾಯಂದಿರಿಗೆ ನೀಡುವ ಮಾಸಿಕ ₹ 2000 ಅನ್ನುಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.

9)ಒಂದು ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು “ಉಚಿತ ಪ್ರಿಪೇಯ್ಡ್ ಹೆಲ್ತ್ ಕಾರ್ಡ್” ವಿತರಣೆ.

10)ವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ ₹ 25 ಕೋಟಿ ಅನುದಾನ.

11) ಒಟ್ಟು 110 “ಕಿತ್ತೂರು ರಾಣಿ ಚೆನ್ನಮ್ಮ” ಶಿಶು ಪಾಲನಾ ಕೇಂದ್ರಗಳ ಸ್ಥಾಪನೆ.

12)ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಮತ್ತು ರಾಜ್ಯದ ಸಂಪನ್ಮೂಲ ಬಳಸಿಕೊಂಡು ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು “ಮನೆ ಮನೆಗೆ ಗಂಗೆ” ನೂತನ ಯೋಜನೆ ಜಾರಿ.

13)ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ ₹ 2000. ನೆರವು. ₹ 40 ಕೋಟಿ ಅನುದಾನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.