ADVERTISEMENT

ರಾಜ್ಯ ಬಜೆಟ್‌: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ; ಹೊಸ 7 ವಿ.ವಿ ಸ್ಥಾಪನೆ 

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 9:27 IST
Last Updated 4 ಮಾರ್ಚ್ 2022, 9:27 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿನ ಉನ್ನತ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಸರ್ಕಾರ ತಿಳಿಸಿದೆ.

2022–23ನೇ ಸಾಲಿನಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಸೇರಿದಂತೆ 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಯನ್ನು ಘೋಷಣೆ ಮಾಡಲಾಗಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು ಹೆಚ್ಚಿಸಿ ಮಾಸಿಕ ಗೌರವಧನವನ್ನು ₹11,000 ದಿಂದ 32,000ಕ್ಕೆ ಹೆಚ್ಚಿಸಲಾಗಿದೆ.

ADVERTISEMENT

ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗುವುದು.

ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು. ವಿಶ್ವವಿದ್ಯಾಲಯಗಳಿಗೆ ವಾರ್ಷಿಕ ತಲಾ 2 ಕೋಟಿ ರೂ.ಗಳ ಆವರ್ತಕ ವೆಚ್ಚ ನೀಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.