ADVERTISEMENT

ರಾಜ್ಯದ ಪ್ರಮುಖ ನಗರಗಳಲ್ಲಿ 'ನಮ್ಮ ಕ್ಲಿನಿಕ್' ಸ್ಥಾಪನೆ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 10:59 IST
Last Updated 4 ಮಾರ್ಚ್ 2022, 10:59 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯದ ಪ್ರಮುಖ ನಗರಗಳಲ್ಲಿ 438 'ನಮ್ಮ ಕ್ಲಿನಿಕ್‌'ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಚೊಚ್ಚಲ ಬಾರಿಗೆ ಬಜೆಟ್ ಮಂಡಿಸಿದ ಬೊಮ್ಮಾಯಿ ಹಲವಾರು ಘೋಷಣೆಗಳನ್ನು ಮಾಡಿದರು.

ರಾಜ್ಯದ ಪ್ರಮುಖ ನಗರಗಳಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ಇವುಗಳನ್ನು ಸ್ಥಾಪಿಸಲಾಗುವುದು. ಈ ಕ್ಲಿನಿಕ್‌ಗಳಲ್ಲಿ ಅಸಾಂಕ್ರಾಮಿಕ ರೋಗಗಳ ಪತ್ತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ತಜ್ಞರ ಬಳಿ ಕಳುಹಿಸುವ ಸೇವೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

300 ಮಹಿಳಾ ಸ್ವಾಸ್ಥ್ಯ ಕೇಂದ್ರ ಸ್ಥಾಪನೆ:
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2022-23ನೇ ಸಾಲಿನಲ್ಲಿ 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇವು ಮಹಿಳಾ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗೆ ಸಲಹೆಯನ್ನು ಪಡೆಯಲು ಹಾಗೂ ಮಹಿಳಾ ಕ್ಷೇಮ ಪಡೆಯಲು ಹಾಗೂ ಮಹಿಳಾ ಕ್ಷೇಮ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ.

ಸುಸಜ್ಜಿತ ವೈದ್ಯಕೀಯ ಸೇವೆ:
ತಾಲ್ಲೂಕು ಮಟ್ಟದಲ್ಲಿ ಸುಸಜ್ಜಿತ ವೈದ್ಯಕೀಯ ಸೇವೆಗಳನ್ನು ಒದಗಿಸಲು ರಾಜ್ಯದ ಏಳು ತಾಲ್ಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.

ಇವನ್ನೂ ಓದಿ:

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.