ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಕಳೆದ ಬಾರಿ ಅವರು ₹3.71 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಬಜೆಟ್ ಗಾತ್ರ ₹4 ಲಕ್ಷ (4,09,549) ಕೋಟಿ ದಾಟಿದೆ.
ಬಜೆಟ್ ಮಂಡನೆಗೂ ಮುನ್ನ ಸಿಎಂ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. 'ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಅವರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ' ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.