ಬೆಂಗಳೂರು ನಗರ ವಿಶ್ವವಿದ್ಯಾಲಯ
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ ಸಿಂಗ್ ಅವರ ಹೆಸರನ್ನಿಡಲು ಹಾಗೂ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
2025–26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಶುಕ್ರವಾರ ಮಂಡಿಸಿದ ಅವರು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ, ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ ₹ 2,500 ಕೋಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದರು.
* ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ದೇಶದಲ್ಲೇ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
* ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ₹ 26 ಕೋಟಿ ನೆರವು
* ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ.
* ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ ₹275 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯ.
* ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ ₹ 10 ಕೋಟಿ ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್ಗಳು ಹಾಗೂ ಪುಸ್ತಕಗಳ ಪೂರೈಕೆ.
* ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ.
* ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಕ.
* ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ ₹ 30 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
* ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆಗೆ ₹ 150 ಕೋಟಿ
* ಅಜೀಂ ಪ್ರೇಮ್ಜೀ ಫೌಂಡೇಶನ್ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್ ಮನನ ತರಬೇತಿ.
* ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್ ತರಬೇತಿ ಯೋಜನೆ.
* KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಆಯೋಜನೆಗೆ ₹ 10 ಕೋಟಿ
* ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭ
* ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ
* ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು
₹25 ಕೋಟಿ ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲು ಘೋಷಣೆ
* ಮಂಗಳೂರಿನಲ್ಲಿರುವ ಮೀನುಗಾರಿಕಾ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿದ ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ
* ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿ ಜಿಲ್ಲೆಗೆ ಎರಡರಂತೆ 62 ಮೆಟ್ರಿಕ್ ನಂತರದ ವಸತಿ ನಿಲಯಗಳ ಸ್ಥಾಪನೆ. ಇದಕ್ಕಾಗಿ ಪ್ರಸಕ್ತ ಸಾಲಿಗೆ ₹15 ಕೋಟಿ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಲೋಕಸೇವಾ ಆಯೋಗದಂಥ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯಗಳ ಪ್ರಾರಂಭ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.