ರಾಜ್ಯ ಬಜೆಟ್ 2024: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು
ಅನ್ನಭಾಗ್ಯ ಯೋಜನೆಯಡಿ, ಸಹಾಯಧನದ ಬದಲಾಗಿ, 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಣೆ; 4.21 ಕೋಟಿ ಫಲಾನುಭವಿಗಳಿಗೆ ಅನುಕೂಲ.
ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ ₹5 ಕೋಟಿ.
80 ವರ್ಷ ಮೇಲ್ಪಟ್ಟ ಹಿರಿಯವರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ʻಅನ್ನ ಸುವಿಧಾʼ ಯೋಜನೆ 75 ವಯಸ್ಸು ಮೇಲ್ಪಟ್ಟ ಹಿರಿಯ ನಾಗರಿಕರು ಇರುವ ಮನೆಗಳಿಗೂ ವಿಸ್ತರಣೆ.
ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್‌ಗೆ 45 ರೂಗಳಿಗೆ ಹೆಚ್ಚಳ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.