ADVERTISEMENT

ಗ್ಯಾರಂಟಿ ಉಚಿತ ಕೊಡುಗೆಯಲ್ಲ, ಆರ್ಥಿಕ-ಸಾಮಾಜಿಕ ತತ್ವದ ಹೂಡಿಕೆಗಳು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2025, 7:02 IST
Last Updated 7 ಮಾರ್ಚ್ 2025, 7:02 IST
<div class="paragraphs"><p>ಪಂಚ ಗ್ಯಾರಂಟಿಗಳು</p></div>

ಪಂಚ ಗ್ಯಾರಂಟಿಗಳು

   

ಬೆಂಗಳೂರು: ಪಂಚ ಗ್ಯಾರಂಟಿಗಳು ಸೇರಿದಂತೆ ನೀಡಿರುವ ಹಲವು ಕಲ್ಯಾಣ ಕಾರ್ಯಕ್ರಮಗಳು ಉಚಿತ ಕೊಡುಗೆಗಳಲ್ಲ; ಇವು ಆರ್ಥಿಕ ಮತ್ತು ಸಾಮಾಜಿಕ ತತ್ವದಲ್ಲಿ ಮಾಡಿರುವ ಹೂಡಿಕೆಗಳು ಎಂದು ಆತ್ಮವಿಶ್ವಾಸದಿಂದ ಹೇಳಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ತಮ್ಮ ಬಜೆಟ್‌ ಭಾಷಣದಲ್ಲಿ ಪಂಚ ಗ್ಯಾರಂಟಿಗಳು ಉಚಿತ ಕೊಡುಗೆಯಲ್ಲ ಎಂದು ಪ್ರತಿಪಾದಿಸಿದರು.

ADVERTISEMENT

ಲಭ್ಯ ಸಂಪನ್ಮೂಲಗಳನ್ನು ಸರ್ವರಿಗೂ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. ಆರ್ಥಿಕ ಅಭಿವೃದ್ಧಿ ಹಾಗೂ ಜನಕಲ್ಯಾಣಗಳ ನಡುವೆ ಸಮತೋಲನ ಸಾಧಿಸಿ, ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯ ಮೂಲಕ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ರೂಪಿಸುತ್ತಿದ್ದೇವೆ ಎಂದರು.

 ನಾಡಿನ ಖ್ಯಾತ ವಿದ್ವಾಂಸರಾಗಿದ್ದ ಮುಜಾಫರ್‌ ಅಸ್ಸಾದಿಯವರು ‘ಗ್ಯಾರಂಟಿ ಯೋಜನೆಗಳ ಹಿಂದೆ ಬಡತನದ ನೋವಿದೆ, ಬಡತನದ ಹಿಂಸೆ ಇದೆ, ಮಹಿಳೆಯರಲ್ಲಿ ಮಡುಗಟ್ಟಿದ ನೋವುಗಳಿವೆ, ಅಸಮಾನ ಭಾರತದ ಪರಿಕಲ್ಪನೆ ಇದೆ‘ ಎಂದಿದ್ದರು. ‌ವಿಶ್ವದ ವಿವಿಧ ವೇದಿಕೆಗಳು ಯಾವ ಪ್ರಶ್ನೆಗಳಿಗೆ ಇಂದು ಹುಡುಕಾಟ ನಡೆಸುತ್ತಿವೆಯೊ ಅವುಗಳಿಗೆ ಕರ್ನಾಟಕ ಸರ್ಕಾರವು ಉತ್ತರ ರೂಪದಲ್ಲಿ ತನ್ನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ. ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಲಭಿಸಲಿ ಎಂಬ ಆಶಯದಿಂದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದರು.

ಮಹಿಳಾ ಸಶಕ್ತೀಕರಣದ ಮೂಲಕ ನಾಡನ್ನು ಮುನ್ನಡೆಸುವುದು ಒಂದು ಬಗೆಯಾದರೆ, ʻಹಸಿರು ಆರ್ಥಿಕತೆʼ ಯ ಮೂಲಕ ಪರಿಸರದ ಬಿಕ್ಕಟ್ಟುಗಳಿಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದರು.

ರಾಜ್ಯವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುತ್ತಿದೆ. ನಮ್ಮ ವಸತಿ ಶಾಲೆಗಳಲ್ಲಿ, ವಿದ್ಯಾರ್ಥಿ ನಿಲಯಗಳಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಮತ್ತು ಆಹಾರವನ್ನು ಪಡೆಯುತ್ತಿದ್ದಾರೆ. ಯುವ ಜನರನ್ನು ಜಾಗತಿಕ ಮಟ್ಟದ ಕೌಶಲ್ಯವಂತರನ್ನಾಗಿಸಲು ಹಲವು ರೀತಿಯ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.